BREAKING: ಮಧ್ಯರಾತ್ರಿ ಮಹಾರಾಷ್ಟ್ರದಲ್ಲಿ 4 ಅಂತಸ್ತಿನ ಕಟ್ಟಡ ಕುಸಿದು ಘೋರ ದುರಂತ: ಮೂವರು ಸಾವು, 9 ಮಂದಿಗೆ ಗಾಯ

ಮುಂಬೈ: ಮುಂಬೈ ಬಳಿಯ ವಿರಾರ್‌ ನಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಮೂವರು ಸಾವನ್ನಪ್ಪಿದ್ದಾರೆ, 9 ಜನರಿಗೆ ಗಾಯಗಳಾಗಿವೆ; ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಮಂಗಳವಾರ ಮಧ್ಯರಾತ್ರಿ ಮುಂಬೈಗೆ ಹೊಂದಿಕೊಂಡಿರುವ ಪಾಲ್ಘರ್ ಜಿಲ್ಲೆಯ ವಿರಾರ್ ಪೂರ್ವದಲ್ಲಿ ನಾಲ್ಕು ಅಂತಸ್ತಿನ ಕಟ್ಟಡದ ಒಂದು ಭಾಗ ಕುಸಿದು ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಒಂಬತ್ತು ಮಂದಿ ಗಾಯಗೊಂಡಿದ್ದಾರೆ. ಅಧಿಕಾರಿಗಳ ಪ್ರಕಾರ, ಸುಮಾರು 8 ರಿಂದ 10 ಜನರು ಇನ್ನೂ ಸಿಲುಕಿಕೊಂಡಿದ್ದಾರೆ ಮತ್ತು ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ.

ನಿನ್ನೆ ರಾತ್ರಿ 11:30 ಕ್ಕೆ ಈ ಅವಘಡ ಸಂಭವಿಸಿದೆ. ಈ ಕಟ್ಟಡ ಹತ್ತು ವರ್ಷ ಹಳೆಯದು ಮತ್ತು ಪುರಸಭೆ ಇದನ್ನು ಅತ್ಯಂತ ಅಪಾಯಕಾರಿ ಎಂದು ಘೋಷಿಸಿತ್ತು.

ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ(ಡಿಡಿಎಂಒ)-ಕಮ್-ಜಿಲ್ಲಾ ಪಾಲ್ಘರ್ ಪ್ರಕಾರ, ವಸಾಯಿ ತಾಲ್ಲೂಕಿನ ನರಂಗಿ ರಸ್ತೆಯಲ್ಲಿರುವ ಚಾಮುಂಡಾ ನಗರ ಮತ್ತು ವಿಜಯ್ ನಗರ ನಡುವೆ ಇರುವ ರಮಾಬಾಯಿ ಅಪಾರ್ಟ್‌ಮೆಂಟ್‌ನ ನಾಲ್ಕು ಅಂತಸ್ತಿನ ಕಟ್ಟಡದ ಹಿಂಭಾಗವು ಕಟ್ಟಡದ ಕೆಳಗಿನ ಭಾಗ ಕುಸಿದಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read