HomeIndiaBREAKING NEWS: ಕಂದಕಕ್ಕೆ ಉರುಳಿದ ಬಸ್;‌ ಮೂವರ ಸಾವು

BREAKING NEWS: ಕಂದಕಕ್ಕೆ ಉರುಳಿದ ಬಸ್;‌ ಮೂವರ ಸಾವು

ಕೇರಳದ ಇಡುಕ್ಕಿ ಜಿಲ್ಲೆಯ ಪುಲ್ಲುಪಾರಾ ಬಳಿ ಸರ್ಕಾರಿ ಬಸ್ ಕಮರಿಗೆ ಉರುಳಿ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ಬೆಳಗ್ಗೆ ಸುಮಾರು 6 ಗಂಟೆಗೆ ಈ ಘಟನೆ ನಡೆದಿದೆ. ತಮಿಳುನಾಡಿನ ತಂಜಾವೂರಿನಿಂದ ಕೇರಳದ ಅಲಪ್ಪುಳದ ಮಾವೇಲಿಕರಕ್ಕೆ ಹಿಂತಿರುಗುತ್ತಿದ್ದ 34 ಪ್ರಯಾಣಿಕರನ್ನು ಹೊತ್ತ ಬಸ್ ಈ ಅವಘಡಕ್ಕೆ ಸಿಲುಕಿದೆ.

ಮೃತರ ದೇಹಗಳನ್ನು ಮುಂಡಕಯಂನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಪೋಸ್ಟ್‌ಮಾರ್ಟಂ ನಂತರ ಸಂಬಂಧಿಕರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular