HomeIndiaಬೈಕ್ ಗೆ ಟ್ರಕ್ ಡಿಕ್ಕಿ: ಅಪಘಾತದಲ್ಲಿ ಮೂವರ ಸಾವು

ಬೈಕ್ ಗೆ ಟ್ರಕ್ ಡಿಕ್ಕಿ: ಅಪಘಾತದಲ್ಲಿ ಮೂವರ ಸಾವು

ಅಮೇಥಿ: ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯಲ್ಲಿ ಮಂಗಳವಾರ ಟ್ರಕ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ನೌಘರ್ ಬಳಿಯ ಜಗದೀಶ್‌ಪುರ-ಮೋಹನ್‌ಗಂಜ್ ರಸ್ತೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವೇಗವಾಗಿ ಬಂದ ಲಾರಿ ನಿಯಂತ್ರಣ ತಪ್ಪಿ ಬೈಕ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತ ಸಂಭವಿಸಿದ ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಮೃತರನ್ನು ರಾಜ್ ಕುಮಾರ್(26), ಅಮಿತ್ ಕುಮಾರ್(23) ಮತ್ತು ಆಕಾಶ್(25) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ತಲೆಮರೆಸಿಕೊಂಡಿದ್ದಾನೆ.

ಮೂವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಟ್ರಕ್ ಅನ್ನು ವಶಪಡಿಸಿಕೊಂಡಿರುವ ಪೊಲೀಸರು ಚಾಲಕನನ್ನು ಬಂಧಿಸಲು ಪ್ರಯತ್ನಿಸುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular