HomeKarnatakaನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ: ಮೂವರು ಸಾವು

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ: ಮೂವರು ಸಾವು

ಚಿತ್ರದುರ್ಗ: ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಮೂವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಸಮೀಪ ನಡೆದಿದೆ.

ಗುಬ್ಬಿ ತಾಲೂಕಿನ ಹೊಸಕೆರೆ ಗ್ರಾಮದ ನರಸಿಂಹಮೂರ್ತಿ(38), ಗಂಗಾಧರ(35), ಲೋಹಿತ್(40) ಮೃತಪಟ್ಟವರು ಎಂದು ಹೇಳಲಾಗಿದೆ. ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಚಾಲಕನ ಬದಿ ಕುಳಿತಿದ್ದವರ ತಲೆ ಕಟ್ ಆಗಿದೆ. ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ತುಮಕೂರು ಜಿಲ್ಲೆಯ ಇವರು ಕಾರ್ ನಲ್ಲಿ ಮಂತ್ರಾಲಯಕ್ಕೆ ತೆರಳಿದ್ದು, ವಾಪಸ್ ಕುಣಿಗಲ್ ಗೆ ಬರುವಾಗ ಅಪಘಾತ ಸಂಭವಿಸಿದೆ. ಕಾರ್ ಚಾಲಕನ ಅಜಾಗರೂಕತೆ ಮತ್ತು ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಎಸ್‌ಪಿ ರಂಜಿತ್ ಕುಮಾರ್ ಭಂಡಾರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಳಕು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular