
ಧನ್ಬಾದ್ನಿಂದ 21 ಕಿ.ಮೀ ದೂರದಲ್ಲಿರುವ ಭಾರತ್ ಕೋಕಿಂಗ್ ಕೋಲ್ ಲಿಮಿಟೆಡ್ನ (BCCL) ಭೋರಾ ಕಲ್ಲಿದ್ದಲು ಪ್ರದೇಶದಲ್ಲಿ ಬೆಳಿಗ್ಗೆ 10.30 ಕ್ಕೆ ಈ ಘಟನೆ ನಡೆದಿದೆ. ಸ್ಥಳೀಯರ ಸಹಾಯದಿಂದ, ಅವಶೇಷಗಳಿಂದ ಮೂವರನ್ನು ಹೊರತೆಗೆದು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು ಎಂದು ಪ್ರತ್ಯಕ್ಷದರ್ಶಿ ಹೇಳಿದರು.
ಅವಷೇಶಗಳಡಿ ಹಲವರು ಸಿಲುಕಿರುವ ಶಂಕೆಯಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆ ನಂತರ ಸಾವುನೋವುಗಳ ನಿಖರ ಸಂಖ್ಯೆ ಗೊತ್ತಾಗಲಿದೆ ಎಂದು ಭೋವ್ರಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಬಿನೋದ್ ಒರಾನ್ ತಿಳಿಸಿದ್ದಾರೆ.

