HomeKarnatakaBREAKING : ಮಂಗಳೂರಲ್ಲಿ ಮನೆ ಮೇಲ್ಛಾವಣಿ ಕುಸಿದು ಮೂವರು ಸಾವು ; ರಾಜ್ಯ ಸರ್ಕಾರದಿಂದ ತಲಾ...

BREAKING : ಮಂಗಳೂರಲ್ಲಿ ಮನೆ ಮೇಲ್ಛಾವಣಿ ಕುಸಿದು ಮೂವರು ಸಾವು ; ರಾಜ್ಯ ಸರ್ಕಾರದಿಂದ ತಲಾ ₹5 ಲಕ್ಷ ಪರಿಹಾರ ಘೋಷಣೆ.!

ಮಂಗಳೂರು :   ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯ ನಡುವೆ ಹೃದಯವಿದ್ರಾವಕ ಘಟನೆ ಸಂಭವಿಸಿದೆ. ಕಂಕನಾಡಿ ಸಮೀಪದ ನಾಗೋರಿಯಲ್ಲಿ ಭೂಕುಸಿತದ ಪರಿಣಾಮ ಮನೆಯ ಮೇಲ್ಛಾವಣಿ ಕುಸಿದು ಇಬ್ಬರು ಬಾಲಕಿಯರು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.

ಭಾರೀ ಮಳೆಯಿಂದ ಮನೆಯ ಹಿಂಭಾಗದ ಮಣ್ಣು ಜಾರಿದ್ದು, ಅದರ ಒತ್ತಡಕ್ಕೆ ಹಳೆಯ ಹೆಂಚಿನ ಮನೆಯ ಮೇಲ್ಛಾವಣಿ ಏಕಾಏಕಿ ಕುಸಿದಿದೆ. ಅವಶೇಷಗಳಡಿ ಸಿಲುಕಿದ ಮೂವರನ್ನು ಸ್ಥಳೀಯರು ಹಾಗೂ ರಕ್ಷಣಾ ಸಿಬ್ಬಂದಿ ಹೊರತೆಗೆದರೂ, ಅಷ್ಟರಲ್ಲೇ ಅವರು ಮೃತಪಟ್ಟಿದ್ದರು. ಓರ್ವ ಮಹಿಳೆ ಹಾಗೂ ಇಬ್ಬರು ಬಾಲಕಿಯರು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾಡಳಿತ, ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಸುತ್ತಮುತ್ತಲಿನ ಅಪಾಯದ ಪ್ರದೇಶಗಳಲ್ಲಿರುವ ನಿವಾಸಿಗಳಿಗೆ ಎಚ್ಚರಿಕೆ ನೀಡಲಾಗಿದ್ದು, ಅಗತ್ಯವಿದ್ದರೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರಾವಳಿ ಕರ್ನಾಟಕದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭೂಕುಸಿತ, ಮನೆ ಕುಸಿತ ಮತ್ತು ಮರ ಬೀಳುವಂತಹ ಘಟನೆಗಳ ಸಾಧ್ಯತೆ ಹೆಚ್ಚಿರುವುದರಿಂದ ಸಾರ್ವಜನಿಕರು ಅನಗತ್ಯವಾಗಿ ಹೊರಗೆ ಓಡಾಡದಂತೆ ಹಾಗೂ ಹಳೆಯ ಅಥವಾ ಅಪಾಯದಲ್ಲಿರುವ ಕಟ್ಟಡಗಳಲ್ಲಿ ವಾಸಿಸುವವರು ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಘಟನೆಯಲ್ಲಿ ಗಾಯಗೊಂಡವರಿಗೆ ಜಿಲ್ಲಾಡಳಿತದಿಂದ ಸೂಕ್ತ ಚಿಕಿತ್ಸೆ ವ್ಯವಸ್ಥೆ ಮಾಡಲಾಗಿದ್ದು, ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಜಿಲ್ಲಾಡಳಿತವೇ ಭರಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಈ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಘೋಷಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದೆ. ನಿರಂತರ ಮಳೆಯ ಹಿನ್ನೆಲೆಯಲ್ಲಿ ಅಪಾಯದ ಪ್ರದೇಶಗಳಲ್ಲಿ ವಾಸಿಸುವ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular