HomeKarnatakaBREAKING NEWS: ರೈಲಿಗೆ ತಲೆಕೊಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆ

BREAKING NEWS: ರೈಲಿಗೆ ತಲೆಕೊಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ತುಮಕೂರು: ರೈಲುಗೆ ತಲೆಕೊಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ತುಮಕೂರಿನ ಪಂಡಿತನಹಳ್ಳಿಯಲ್ಲಿ ನಡೆದಿದೆ.

ಸಿದ್ದಗಂಗಯ್ಯ (62) ಸುನಂದಮ್ಮ ಹಾಗೂ ಗೀತಾ ಆತ್ಮಹತ್ಯೆಗೆ ಶರಣಾದವರು. ಸಾಲಬಾಧೆಯಿಂದ ಬೇಸತ್ತಿದ್ದ ದಂಪತಿ, ಮಗಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತುಮಕೂರಿನ ಮರಳೂರು ನಿವಾಸಿಯಾಗಿದ್ದ ಸಿದ್ದಗಂಗಯ್ಯ, ಕೆಇಬಿಯಲ್ಲಿ ಕೆಲಸ ಮಾಡುತ್ತಿದ್ದರು. ಎರಡು ವರ್ಷಗಳ ಹಿಂದೆ ನಿವೃತ್ತಿಯಾಗಿದ್ದರು. ಸಾಲ ಮಾಡಿಕೊಂಡಿದ್ದ ಸಿದ್ದಗಂಗಯ್ಯ, ಬೆಂಗಳೂರಿನ ಮಲ್ಲೇಶ್ವರಂ ಕೆ.ಸಿ.ಜನರಲ್ ಆಸ್ಪತ್ರೆ ಬಳಿ ಟೀ ಶಾಪ್ ಇಟ್ಟುಕೊಂಡಿದ್ದರು.

ಇಂದು ಆಟೋದಲ್ಲಿ ಬೆಳಿಗ್ಗೆಯೇ ದಂಪತಿ ಹಾಗೂ ಮಗಳು ಪಂಡಿತರಹಳ್ಳಿ ಬಳಿ ಬಂದಿದೆ. ಬಳಿಕ ರೈಲ್ವೆ ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ರೈಲು ಗುದ್ದಿದ ಪರಿಣಾಮ ಮೃತದೇಹಗಳು ಚಲ್ಲಾಪಿಲ್ಲಿಯಾಗಿವೆ. ಯಶವಂತಪುರ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular