HomeKarnatakaತಡರಾತ್ರಿ ಜೈಲಿನ ಕಾಂಪೌಂಡ್ ಹಾರಿ ಮೂವರು ಕೈದಿಗಳು ಪರಾರಿ: ಗೃಹ ಸಚಿವರ ತವರು ಜಿಲ್ಲೆಯಲ್ಲೇ ಘಟನೆ

ತಡರಾತ್ರಿ ಜೈಲಿನ ಕಾಂಪೌಂಡ್ ಹಾರಿ ಮೂವರು ಕೈದಿಗಳು ಪರಾರಿ: ಗೃಹ ಸಚಿವರ ತವರು ಜಿಲ್ಲೆಯಲ್ಲೇ ಘಟನೆ

ಕಲಬುರಗಿ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಜಿಲ್ಲೆಯ ಕೇಂದ್ರ ಕಾರಾಗೃಹದಿಂದ ಮೂವರು ಸಜಾ ಬಂಧಿ ಕೈದಿಗಳು ಪರಾರಿಯಾಗಿದ್ದಾರೆ.

ಮಸ್ತಾನ್, ಸಂತೋಷ್, ಸಾಗರ್ ಪರಾರಿಯಾದ ಕೈದಿಗಳು. ಬೀದರ್ ನಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಈ ಮೂವರು ಶಿಕ್ಷೆಗೆ ಒಳಗಾಗಿದ್ದರು. ತಡರಾತ್ರಿ ಮೂರು ಗಂಟೆ ವೇಳೆಗೆ ಜೈಲಿನ ಕಾಂಪೌಂಡ್ ಹಾರಿ ಈ ಮೂವರು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಜೈಲಿನಿಂದ ಮೂವರು ಕೈದಿಗಳು ಪರಾರಿಯಾಗಲು ಜೈಲು ಸಿಬ್ಬಂದಿ ಸಹಕಾರ ನೀಡಿದ ಆರೋಪ ಕೇಳಿ ಬಂದಿದೆ. ಮಧ್ಯರಾತ್ರಿ ಲಾಕಪ್ ನಲ್ಲಿ ಇರಬೇಕಾದ ಕೈದಿಗಳನ್ನು ಜೈಲು ಸಿಬ್ಬಂದಿ ಏಕೆ ಹೊರಗೆ ಬಿಟ್ಟರು ಎನ್ನುವ ಪ್ರಶ್ನೆ ಎದುರಾಗಿದೆ. ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜುಲೈ 3ರಂದು ಕಲಬುರಗಿ ಜಿಲ್ಲೆ ಅಫಜಲ್ಪುರ ಪೊಲೀಸ್ ಠಾಣೆಯಿಂದ ಪೋಕ್ಸೋ ಪ್ರಕರಣದ ಆರೋಪಿ ಪರಾರಿಯಾಗಿದ್ದ. ಈಗ ಕಾರಾಗೃಹದಿಂದ ಮೂವರು ಕೈದಿಗಳು ಪರಾರಿಯಾಗಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular