ನವದೆಹಲಿ: ದೆಹಲಿಯ ಸೀಲಾಂಪುರ್ ಪ್ರದೇಶದಲ್ಲಿ ಶನಿವಾರ ಮೂರು ಅಂತಸ್ತಿನ ಕಟ್ಟಡ ಕುಸಿದಿದ್ದು, ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಅಗ್ನಿಶಾಮಕ ಇಲಾಖೆಯ ಪ್ರಕಾರ, 3 ರಿಂದ 4 ಜನರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ, ಆದರೆ ಹಲವಾರು ಮಂದಿ ಸಿಲುಕಿರುವ ಶಂಕೆ ಇದೆ ಎಂದು ಹೇಳಿದ್ದಾರೆ.
ಸದ್ಯ ಏಳು ಅಗ್ನಿಶಾಮಕ ದಳದ ವಾಹನಗಳು ಸ್ಥಳದಲ್ಲಿದ್ದು, ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ನಡೆಸುತ್ತಿವೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
TAGGED:ದೆಹಲಿ