HomeLatest Newsಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ ಬೆನ್ನಲ್ಲೇ ಮೂವರು ವಿದ್ಯಾರ್ಥಿಗಳು ಸಾವು

ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ ಬೆನ್ನಲ್ಲೇ ಮೂವರು ವಿದ್ಯಾರ್ಥಿಗಳು ಸಾವು

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಇದರ ಬೆನ್ನಲ್ಲೇ ಮೂವರು ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ.

ಚಿತ್ರದುರ್ಗದ ಡಾನ್ ಬಾಸ್ಕೋ ಶಾಲೆಯ ವಿದ್ಯಾರ್ಥಿ ಅಯಾನ್ ಬೇಗ್(16) ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಫೇಲಾದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಫಲಿತಾಂಶ ಪ್ರಕಟವಾದ ಕೂಡಲೇ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಕನ್ನಡ ವಿಷಯದಲ್ಲಿ 125 ಅಂಕಗಳಿಗೆ 34 ಅಂಕ ಪಡೆದಿದ್ದ ಅಯಾನ್ ಅನುತ್ತೀರ್ಣನಾಗಿದ್ದರಿಂದ ಬೇಸರಗೊಂಡು ಫ್ಯಾನ್ ಗೆ ವೇಲ್ ನಿಂದ ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದಾನೆ.

ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದರೂ ಕೂಡ ಕಡಿಮೆ ಅಂಕ ಬಂದಿದೆ ಎಂದು ಮನನೊಂದು ನಂಜನಗೂಡು ತಾಲೂಕಿನ ಕುರಹಟ್ಟಿ ಗ್ರಾಮದ ಶ್ರೀ ಗುರು ಮಲ್ಲೇಶ್ವರ ಖಾಸಗಿ ಶಾಲೆಯ ವಿದ್ಯಾರ್ಥಿನಿ ತ್ರಿಶಾಲಾ(16) ಆತ್ಮಹತ್ಯೆಗೆ ಶರಣಾಗಿದ್ದಾಳೆ. ತ್ರಿಶಾಲಾ 625ಕ್ಕೆ 440 ಅಂಕ ಪಡೆದು ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದು, ಇನ್ನು ಹೆಚ್ಚಿನ ಅಂಕದ ನಿರೀಕ್ಷೆಯಲ್ಲಿದ್ದ ತ್ರಿಶಾಲಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾದ ಕೂಡಲೇ ಪಾಸಾದ ಖುಷಿಯಲ್ಲಿ ಈಜಲು ಹೋದ ಬಾಲಕ ಬಾವಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಮುಳಬಾಗಿಲು ತಾಲೂಕಿನಲ್ಲಿ ನಡೆದಿದೆ. ಕಿರಣ್ ಸ್ನೇಹಿತರೊಂದಿಗೆ ಬಾವಿಯಲ್ಲಿ ಈಜಲು ಹೋದಾಗ ಮುಳುಗಿ ಮೃತಪಟ್ಟಿದ್ದಾನೆ. 239 ಅಂಕ ಪಡೆದು ಪಾಸ್ ಆದ ಖುಷಿಯಲ್ಲಿ ಈಜಲು ಹೋಗಿದ್ದ. ಆದರೆ ಆತನಿಗೆ ಈಜು ಬರುತ್ತಿರಲಿಲ್ಲ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular