ರಾಷ್ಟ್ರ ಮಟ್ಟದ ‘INSPIRE AWARD’ ಸ್ಪರ್ಧೆಗೆ ಶಿವಮೊಗ್ಗ ಜಿಲ್ಲೆಯ ಮೂವರು ವಿದ್ಯಾರ್ಥಿಗಳು ಆಯ್ಕೆ

ಶಿವಮೊಗ್ಗ : 2021-22 ನೇ ಸಾಲಿಗೆ ಶಿವಮೊಗ್ಗ ಜಿಲ್ಲೆಯಿಂದ ‘ಇನ್ಸ್ಪೈರ್ ಅವಾರ್ಡ್’ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶದ ಕೆಳಕಂಡ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ನವದೆಹಲಿಯಲ್ಲಿ ಅ.9 ರಿಂದ 11 ರವರೆಗೆ ನಡೆಯುವ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.

ಶಿವಮೊಗ್ಗ ತಾಲ್ಲೂಕಿನ ಆಯನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಾರ್ಥನ ಎಸ್ ಶೆಟ್ಟಿ, ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಕುವೆಂಪು ಶತಮಾನೋತ್ಸವ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಅಪೇಕ್ಷ ಹೆಚ್.ಪಿ. ಹಾಗೂ ಭದ್ರಾವತಿ ತಾಲ್ಲೂಕಿನ ಅರಳಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ಚಂದ್ರಮ್ಮ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ರಾಷ್ಟ್ರ ಮಟ್ಟದಲ್ಲಿ ಭಾಗವಹಿಸುತ್ತಿರುವ ವಿದ್ಯಾರ್ಥಿನಿಯರನ್ನು ಡಯಟ್ ಪ್ರಾಂಶುಪಾಲರಾದ ಬಿ.ಆರ್.ಬಸವರಾಜಪ್ಪ, ಇನ್ಸ್ಪೈರ್ ಅವಾರ್ಡ್ ಜಿಲ್ಲಾ ನೋಡಲ್ ಅಧಿಕಾರಿ ನಾಗರಾಜ ಎಂ, ಇತರೆ ಉಪನ್ಯಾಸಕರು, ನೌಕರ ವೃಂದದವರು ಅಭಿನಂದಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read