ವಸತಿ ಗೃಹದಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ತನಿಖೆಗೆ ಮೂರು ತಂಡ ರಚನೆ

ಮಂಡ್ಯ: ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಆರೋಗ್ಯ ಇಲಾಖೆ ವಸತಿ ಗೃಹದಲ್ಲಿ ಹೆಣ್ಣು ಭ್ರೂಣ ಹತ್ಯೆ ನಡೆಸುತ್ತಿದ್ದ ಪ್ರಕರಣದ ತನಿಖೆಗಾಗಿ ಮೂರು ತಂಡಗಳನ್ನು ರಚಿಸಲಾಗಿದೆ.

ಡಿ.ವೈ.ಎಸ್.ಪಿ. ಮುರುಳಿ ಅವರ ನೇತೃತ್ವದಲ್ಲಿ ಮೂರು ತಂಡಗಳ ರಚನೆಯಾಗಿದ್ದು, ಕೃತ್ಯದಲ್ಲಿ ಭಾಗಿಯಾದ ಇತರೆ ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ. ಆರೋಪಿಗಳಾದ ಅಶ್ವಿನಿ, ಆನಂದ್, ಶಶಿಕಲಾ, ಖಾಸಗಿ ನರ್ಸಿಂಗ್ ಹೋಂನ ಗಿರಿಜಾಂಬಾ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇವರು ಅಕ್ರಮವಾಗಿ ಹಣ ಸಂಪಾದಿಸಲು ಗರ್ಭಪಾತ ನಡೆಸುತ್ತಿದ್ದರು ಎಂದು ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

ವಸತಿಗೃಹದಲ್ಲಿ ಪೊಲೀಸರು ಮಹಜರು ನಡೆಸಿದ್ದು, ಕೃತ್ಯಕ್ಕೆ ಬಳಸಿದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತನಿಖೆ ಮುಂದುವರೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read