HomeKarnatakaBIG NEWS : ಬರ ಸಮೀಕ್ಷೆ ನಡೆಸಲು ಕೇಂದ್ರದ ಮೂರು ತಂಡಗಳು ಇಂದು ರಾಜ್ಯಕ್ಕೆ ಆಗಮನ

BIG NEWS : ಬರ ಸಮೀಕ್ಷೆ ನಡೆಸಲು ಕೇಂದ್ರದ ಮೂರು ತಂಡಗಳು ಇಂದು ರಾಜ್ಯಕ್ಕೆ ಆಗಮನ

ಬೆಂಗಳೂರು : ಬರ ಸಮೀಕ್ಷೆ ನಡೆಸಲು ಕೇಂದ್ರದ ಮೂರು ತಂಡಗಳು ಇಂದು ರಾಜ್ಯಕ್ಕೆ ( Karnataka)  ಆಗಮಿಸಲಿದೆ.

ಬರ ಸಮೀಕ್ಷೆ ನಡೆಸಲು ಇಂದು ಕೇಂದ್ರದ ಮೂರು ತಂಡಗಳು ರಾಜ್ಯಕ್ಕೆ ಆಗಮಿಸಲಿದ್ದು, 12 ಜಿಲ್ಲೆಗಳಲ್ಲಿ ಬರ ಸಮೀಕ್ಷೆ ನಡೆಸಲಿವೆ. ಸಮೀಕ್ಷೆಗೂ ಮುನ್ನ ಕೇಂದ್ರ ತಂಡಗಳ ಜತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 2.45ಕ್ಕೆ ವಿಧಾನಸೌಧದಲ್ಲಿ ಈ ಸಭೆ ನಡೆಯಲಿದೆ.

ಇಂದಿನಿಂದ ಅ.9ರವರೆಗೆ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ, ಚಿತ್ರದುರ್ಗ, ಹಾವೇರಿ, ಗದಗ, ಕೊಪ್ಪಳ, ವಿಜಯನಗರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ ಒಟ್ಟು 12 ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಿದ್ದಾರೆ. 161 ತಾಲೂಕುಗಳಲ್ಲಿ ತೀವ್ರವಾದ ಬರ ಪರಿಸ್ಥಿತಿ ಇದೆ. 34 ತಾಲೂಕುಗಳಲ್ಲಿ ಸಾಧಾರಣ ಬರದ ಪರಿಸ್ಥಿತಿ. ಒಟ್ಟು 195 ತಾಲೂಕುಗಳಲ್ಲಿ ಬರದ ಪರಿಸ್ಥಿತಿ ಇದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular