HomeLatest NewsBIG NEWS: ಮೂರು ಗ್ರಾಮಗಳಿಂದ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ

BIG NEWS: ಮೂರು ಗ್ರಾಮಗಳಿಂದ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ

ಕೋಲಾರ: ಲೋಕಸಭಾ ಚುನಾವಣೆ ಮತದಾನಕ್ಕೆ ಒಂದು ದಿನ ಮಾತ್ರ ಬಾಕಿ ಇದೆ. ನಾಳೆ ರಾಜ್ಯದ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಆದರೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮೂರು ಗ್ರಾಮಗಳ ಜನರು ಮತದಾನ ಬಹಿಷ್ಕಾರಿಸಲು ನಿರ್ಧರಿಸಿದ್ದಾರೆ.

ಬೈರ್ನಹಳ್ಳಿ, ತೊರ್ನಹಳ್ಳಿ, ಸೊಣ್ಣನಾಯಕನಹಳ್ಳಿಯ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದಾರೆ. ಕೆ.ಸಿ.ವ್ಯಾಲಿ ನೀರು ಗ್ರಾಮಗಳ ಕೆರೆಗಳಿಗೆ ಹರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದು, ಒಂದು ವೇಳೆ ಜಿಲ್ಲಾಡಳಿತ ನೀರು ಹರಿಸದಿದ್ದರೆ ನಾಳೆ ಮತದಾನ ಮಾಡುವುದಿಲ್ಲ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ನೀರು ಬಿಡದಿದ್ದರೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಾಳೆ ಮತದಾನದಲ್ಲಿ ಭಾಗವಹಿಸಲ್ಲ ಎಂದು ಜಿಲ್ಲಾಡಳಿತಕ್ಕೆ ಗ್ರಾಮಸ್ಥರು ಎಚ್ಚರಿಕೆ ಕೊಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular