ಭೋಪಾಲ್: ಮಧ್ಯಪ್ರದೇಶದ ಚಿಂದ್ವಾರದಲ್ಲಿ ಮುಖ್ಯಮಂತ್ರಿ ಮೋಹನ್ ಯಾದವ್ ಭಾಗವಹಿಸಿದ್ದ ಸಾರ್ವಜನಿಕ ಕಾರ್ಯಕ್ರಮದಿಂದ ಹಿಂತಿರುಗುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಮೂವರು ಮಹಿಳೆಯರು ಸೇರಿದಂತೆ 10 ಜನರು ಸಾವನ್ನಪ್ಪಿದ್ದಾರೆ.
ಮಧ್ಯಪ್ರದೇಶದ ಚಿಂದ್ವಾರದಲ್ಲಿ ಗುರುವಾರ ರಾತ್ರಿ ಮುಖ್ಯಮಂತ್ರಿ ಮೋಹನ್ ಯಾದವ್ ಭಾಗವಹಿಸಿದ್ದ ಸಾರ್ವಜನಿಕ ಕಾರ್ಯಕ್ರಮದಿಂದ ಹಿಂತಿರುಗುತ್ತಿದ್ದ ಬಸ್ ಅಪಘಾತಕ್ಕೀಡಾದ ನಂತರ ಕನಿಷ್ಠ 10 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲಾ ಕೇಂದ್ರದಿಂದ ಸುಮಾರು 25 ಕಿ.ಮೀ ದೂರದಲ್ಲಿರುವ ನಾಗ್ಪುರ ರಸ್ತೆಯ ಸಿಮಾರಿಯಾ ಬಳಿ ಬಸ್ ಪಿಕ್-ಅಪ್ ವಾಹನಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತ ಸಂಭವಿಸಿದಾಗ ಬಸ್ 47 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ, ಮೃತರಲ್ಲಿ ಆರು ಪುರುಷರು, ಮೂವರು ಮಹಿಳೆಯರು ಮತ್ತು ಒಂದು ಮಗು ಸೇರಿದ್ದಾರೆ. ಘಟನೆಯಲ್ಲಿ 35 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ, ಅವರನ್ನು ಈಗ ಜಿಲ್ಲಾ ಆಸ್ಪತ್ರೆ ಮತ್ತು ಇತರ ವೈದ್ಯಕೀಯ ಸೌಲಭ್ಯಗಳಿಗೆ ಕರೆದೊಯ್ಯಲಾಗಿದೆ. ಆರು ಜನರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಬಸ್ 47 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು. ಪಿಕ್-ಅಪ್ ವಾಹನದೊಂದಿಗೆ ಡಿಕ್ಕಿ ಹೊಡೆದ ನಂತರ ಸಿಮಾರಿಯಾ ಬಳಿ ಅಪಘಾತ ಸಂಭವಿಸಿದೆ. ಡಿಕ್ಕಿ ಅತ್ಯಂತ ಗಂಭೀರವಾಗಿತ್ತು. ಬಸ್‌ನಲ್ಲಿದ್ದ ಬಹುತೇಕ ಎಲ್ಲರೂ ಗಾಯಗೊಂಡರು. ಗಾಯಾಳುಗಳಲ್ಲಿ ಒಬ್ಬರನ್ನು ನಾಗ್ಪುರಕ್ಕೆ ಕಳುಹಿಸಲಾಗಿದೆ. ಇಲ್ಲಿಯವರೆಗೆ, 10 ಜನರು ಸಾವನ್ನಪ್ಪಿದ್ದಾರೆ” ಎಂದು ಚಿಂದ್ವಾರ ಜಿಲ್ಲಾಧಿಕಾರಿ ಹರೇಂದ್ರ ನಾರಾಯಣ್ ಸುದ್ದಿಗಾರರಿಗೆ ತಿಳಿಸಿದರು.
ಮುಖ್ಯಮಂತ್ರಿ ಅವರು ಅಪಘಾತವನ್ನು ‘ಹೃದಯ ವಿದ್ರಾವಕ’ ಎಂದು ಕರೆದಿದ್ದಾರೆ ಮತ್ತು ಸಂತ್ರಸ್ತ ಕುಟುಂಬಗಳಿಗೆ ತಮ್ಮ ಸಂತಾಪ ಸೂಚಿಸಿದ್ದಾರೆ. ಮೃತರ ಸಂಬಂಧಿಕರಿಗೆ 4 ಲಕ್ಷ ರೂ. ಪರಿಹಾರ ಮತ್ತು ಗಾಯಾಳುಗಳಿಗೆ ತಲಾ 1 ಲಕ್ಷ ರೂ. ಆರ್ಥಿಕ ಸಹಾಯವನ್ನು ಅವರು ಘೋಷಿಸಿದರು. ಹೆಚ್ಚುವರಿಯಾಗಿ, ಗಾಯಾಳುಗಳಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಯಾದವ್ ಹೇಳಿದರು,

