HomeKarnatakaBREAKING NEWS: ಜಮೀನಿನಲ್ಲಿ ಕೆಲಸದ ವೇಳೆ ಸಿಡಿಲು ಬಡಿದು ರೈತರಿಬ್ಬರು ಸ್ಥಳದಲ್ಲೇ ಸಾವು

BREAKING NEWS: ಜಮೀನಿನಲ್ಲಿ ಕೆಲಸದ ವೇಳೆ ಸಿಡಿಲು ಬಡಿದು ರೈತರಿಬ್ಬರು ಸ್ಥಳದಲ್ಲೇ ಸಾವು

ದಾವಣಗೆರೆ: ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಸಿಡಿಲು ಬಡಿದು ಇಬ್ಬರು ರೈತರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.  ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಅಬಣೂರಿನಲ್ಲಿ ಘಟನೆ ನಡೆದಿದೆ.

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಕಾಟಲಿಂಗಪ್ಪ(43) ಹಾಗೂ ರಾಜು(35) ಮೃತಪಟ್ಟವರು ಎಂದು ಹೇಳಲಾಗಿದೆ. ಸ್ಥಳಕ್ಕೆ ಶಾಸಕ ಬಿ. ದೇವೇಂದ್ರಪ್ಪ, ತಹಶೀಲ್ದಾರ್ ಸಂತೋಷ್ ಭೇಟಿ ನೀಡಿದ್ದಾರೆ. ಮೃತರ ಕುಟುಂಬದವರಿಗೆ ಸೂಕ್ತ ಪರಿಹಾರದ ಭರವಸೆ ನೀಡಲಾಗಿದೆ. ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular