ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ವಾರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಏಪ್ರಿಲ್ 22 ರಿಂದ 26ರವರೆಗೆ ರಾಜ್ಯದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಏಪ್ರಿಲ್ 22ರಂದು 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಬಳ್ಳಾರಿ, ವಿಜಯನಗರ, ಹಾವೇರಿ, ದಾವಣಗೆರೆ, ಉತ್ತರ ಕನ್ನಡ, ಬೆಳಗಾವಿ, ಉಡುಪಿ, ದಕ್ಷಿಣ ಕನ್ನಡ, ಹಾಸನ, ಕೊಡಗು, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಏಪ್ರಿಲ್ 23ರಂದು ಬೆಳಗಾವಿ, ಗದಗ, ಹಾವೇರಿ, ಶಿವಮೊಗ್ಗ, ಹಾಸನ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಮುಂದಿನ ನಾಲ್ಕು ದಿನಗಳ ಕಾಲ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹೇಳಲಾಗಿದೆ.

