HomeLatest Newsರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಒಣಹವೆ ಮುಂದುವರೆದಿದ್ದು, ಕೆಲವು ಭಾಗದಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ದಕ್ಷಿಣ ಒಳನಾಡಿನ ಕೆಲವು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು ಭಾಗದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೋಲಾರ, ಹಾಸನ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಚಿತ್ರದುರ್ಗ, ದಾವಣಗೆರೆ ಭಾಗದಲ್ಲಿ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ವಾತಾವರಣ ಮುಂದುವರೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular