HomeKarnatakaRain alert : ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ; ಈ...

Rain alert : ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ; ಈ 15 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ.!

ಬೆಂಗಳೂರು :   ರಾಜ್ಯದ ಹಲವೆಡೆ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಇಂದೂ ಕೂಡ ರಾಜ್ಯದಾದ್ಯಂತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹಾವೇರಿ, ಧಾರವಾಡ, ಬೆಳಗಾವಿ ಸೇರಿದಂತೆ ಒಟ್ಟು 15 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯ ನಿರೀಕ್ಷೆಯಿದೆ.ರಾಜ್ಯದ ಒಟ್ಟು 15 ಜಿಲ್ಲೆಗಳಿಗೆ ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.

ಯಾವ ಜಿಲ್ಲೆಗಳಲ್ಲಿ ಮಳೆ ?: ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಹಾವೇರಿ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.ಉಳಿದ ಭಾಗಗಳಲ್ಲಿ ಒಣ ಹವೆಯ ವಾತಾವರಣ ಮುಂದುವರಿಯಲಿದೆ ಎಂದು ವರದಿಯಾಗಿದೆ. ಒಟ್ಟಾರೆಯಾಗಿ, ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ಹವಾಮಾನ: ರಾಜಧಾನಿಯಲ್ಲಿ ಇಂದು ಮಿಶ್ರ ವಾತಾವರಣವಿರಲಿದೆ. ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಬಹುದು. ಸಂಜೆ ಅಥವಾ ರಾತ್ರಿಯ ವೇಳೆ ಶೇ. 10 ರಿಂದ 20 ರಷ್ಟು ಮಳೆಯಾಗುವ ಸಾಧ್ಯತೆ ಇದೆ.

ತಾಪಮಾನ ಏರಿಕೆ: ಮಳೆಯ ಮುನ್ಸೂಚನೆ ಇದ್ದರೂ, ಏಪ್ರಿಲ್ ತಿಂಗಳಿನಲ್ಲಿ ವಾಡಿಕೆಗಿಂತ ಹೆಚ್ಚಿನ ತಾಪಮಾನ ಮತ್ತು ಬಿಸಿಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಹವಾಮಾನ ಇಲಾಖೆ ತಿಳಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular