HomeLive Newsರಾಜ್ಯದ ಹಲವೆಡೆ ಗುಡುಗು, ಸಿಡಿಲು, ಆಲಿಕಲ್ಲು ಮಳೆ ಅಬ್ಬರ: ಸಿಡಿಲಿಗೆ ಬಾಲಕ ಸಾವು

ರಾಜ್ಯದ ಹಲವೆಡೆ ಗುಡುಗು, ಸಿಡಿಲು, ಆಲಿಕಲ್ಲು ಮಳೆ ಅಬ್ಬರ: ಸಿಡಿಲಿಗೆ ಬಾಲಕ ಸಾವು

ಬೆಂಗಳೂರು: ರಾಜ್ಯದ 13 ಜಿಲ್ಲೆಗಳಲ್ಲಿ ಬೇಸಿಗೆ ಮಳೆ ಆರ್ಭಟಿಸಿದೆ. ಕೊಪ್ಪಳದಲ್ಲಿ ಸಿಡಿಲಿಗೆ ಬಾಲಕ ಬಲಿಯಾಗಿದ್ದಾನೆ.

ಗುಡುಗು ಸಿಡಿಲಿನ ಆರ್ಭಟದೊಂದಿಗೆ ಕೆಲವು ಕಡೆ ಆಲಿಕಲ್ಲು ಸಹಿತ ಮಳೆಯಾಗಿದೆ. ಹಾಸನದಲ್ಲಿ ಭಾರಿ ಗಾಳಿಗೆ ಮರದ ರಂಬೆ ಕೊಂಬೆಗಳು ಬಿದ್ದಿವೆ. ಮೈಸೂರು, ಚಾಮರಾಜನಗರ, ದಾವಣಗೆರೆ, ಹರಿಹರ ಭಾಗದಲ್ಲಿ ಧಾರಾಕಾರ ಮಳೆಯಾಗಿದೆ. ಚಾಮರಾಜನಗರದ ಹಲವಡೆ ಒಂದು ಗಂಟೆಗೂ ಅಧಿಕ ಕಾಲ ಮಳೆಯಾಗಿದ್ದು, ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಜನರಿಗೆ ತಂಪಿನ ಅನುಭವವಾಗಿದೆ.

ಗುಂಡ್ಲುಪೇಟೆ ತಾಲೂಕಿನ ಕೆಲವು ಕಡೆ ಸಿಡಿಲು, ಗುಡುಗು ಆಲಿಕಲ್ಲು ಸಹಿತ ಮಳೆಯಾಗಿದೆ. ಮೈಸೂರಿನ ಬೆಟ್ಟದಪುರದಲ್ಲಿ ಸಿಡಿಲು ಸಹಿತ ಮಳೆಯಾಗಿದೆ. ಕೊಪ್ಪಳದ ಯಲಬುರ್ಗಾ ತಾಲೂಕಿನಲ್ಲಿ ಸಿಡಿಲು ಬಡಿದು 8ನೇ ತರಗತಿಯ ಮಂಜುನಾಥ(14) ಮೃತಪಟ್ಟಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಜಯನಗರ ಜಿಲ್ಲೆಯ ಕೊಟ್ಟೂರು, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಬಾಳೇಹೊನ್ನೂರಿನಲ್ಲಿ ಮಳೆಯಾಗಿದೆ. ಹಾಸನ ಸೇರಿ ಆಲೂರು ತಾಲೂಕಿನ ಹಲವು ಕಡೆ ಆಲಿಕಲ್ಲು ಸಹಿತ ಭಾರಿ ಗುಡುಗು ಸಿಡಿಲಿನೊಂದಿಗೆ ಮಳೆಯಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular