HomeKarnatakaರಾಜ್ಯದಲ್ಲಿ ಮೂರು ದಿನ ಗುಡುಗು, ಮಿಂಚು ಸಹಿತ ಮಳೆ ಮುನ್ಸೂಚನೆ

ರಾಜ್ಯದಲ್ಲಿ ಮೂರು ದಿನ ಗುಡುಗು, ಮಿಂಚು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ ಮೂರು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿರಲಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 30 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಂಭವ ಇದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಮೈಸೂರು, ಹಾಸನ, ಮಂಡ್ಯ ಜಿಲ್ಲೆಗಳಲ್ಲಿ ಮೇ 8 ಮತ್ತು 9ರಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉತ್ತರ ಒಳನಾಡಿನ ಗದಗ, ಧಾರವಾಡ, ಹಾವೇರಿ ಜಿಲ್ಲೆಯ ಕೆಲವೆಡೆ ಮೇ 8ರಂದು ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಮಳೆಯ ಮುನ್ಸೂಚನೆ ಇದ್ದರೂ ರಾಜ್ಯದ ಗರಿಷ್ಠ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆಯ ಸಾಧ್ಯತೆ ಇಲ್ಲ. ಉತ್ತರ ಒಳನಾಡಿನ ಕೆಲವು ಭಾಗದಲ್ಲಿ ಗರಿಷ್ಠ ತಾಪಮಾನ 38 ರಿಂದ 40 ಡಿಗ್ರಿ ಸೆಲ್ಸಿಯಸ್ ವರೆಗೆ ಮುಂದುವರೆಯಲಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಭಾಗದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಸಂಜೆ ವೇಳೆಗೆ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular