BREAKING: ಎಂಪಿ ಚುನಾವಣೆ ಟಿಕೆಟ್ ಕೊಡಿಸುವುದಾಗಿ ವಂಚನೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೋದರನ ವಿರುದ್ಧ ಎಫ್ಐಆರ್

ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರನ ವಿರುದ್ಧ ವಂಚನೆ ಆರೋಪದಡಿ ಎಫ್ಐಆರ್ ದಾಖಲಿಸಲಾಗಿದೆ.

ಲೋಕಸಭೆ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಎರಡು ಕೋಟಿ ರೂಪಾಯಿ ಪಡೆದು ವಂಚನೆ, ಜಾತಿ ನಿಂದನೆ ಮಾಡಿದ ಆರೋಪ ಕೇಳಿ ಬಂದಿದೆ. ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ವಿರುದ್ಧ ಗಂಭೀರ ಆರೋಪ ಮಾಡಲಾಗಿದೆ.

ಮಾಜಿ ಶಾಸಕ ದೇವಾನಂದ ಚೌಹಾಣ್ ಪತ್ನಿ ಸುನಿತಾ ಚೌಹಾಣ್ ದೂರು ನೀಡಿದ್ದಾರೆ. 2018 ರಲ್ಲಿ ನಾಗಠಾಣಾ ಕ್ಷೇತ್ರದಿಂದ ದೇವಾನಂದ ಜೆಡಿಎಸ್ ಶಾಸಕರಾಗಿದ್ದರು.

ಬೆಂಗಳೂರಿನ ಬಸವೇಶ್ವರನಗರ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಗೋಪಾಲ ಜೋಶಿ, ಸಹೋದರಿ ವಿಜಯಲಕ್ಷ್ಮಿ ಜೋಶಿ, ಪುತ್ರ ಅಜಯ್ ಜೋಶಿ ವಿರುದ್ಧ ಪ್ರಕರಣ ದಾಖಲಾಗಿದೆ. ಸುನಿತಾ ಚೌಹಾನ್ ಅವರು ನೀಡಿದ ದೂರಿನ ಮೇರೆಗೆ ಕೇಸು ದಾಖಲಾಗಿದೆ.

 

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read