ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಟಿಕೆಟ್ ದರ 3500 ರೂ., ಗೋಲ್ಡ್ ಕಾರ್ಡ್ ಗೆ 6500 ರೂ. ನಿಗದಿ

ಮೈಸೂರು: ನಾಡಹಬ್ಬ ವಿಶ್ವವಿಖ್ಯಾತ ಮೈಸೂರು ದಸರಾ -2025ರ ಟಿಕೆಟ್ ಮತ್ತು ಗೋಲ್ಡ್ ಕಾರ್ಡ್ ಗಳನ್ನು ಸಾರ್ವಜನಿಕ ಬಳಕೆಗೆ ಜಿಲ್ಲಾಡಳಿತ ದಸರಾ ಅಧಿಕೃತ ವೆಬ್ಸೈಟ್ನಲ್ಲಿ ಶನಿವಾರ ಮಧ್ಯಾಹ್ನ ಬಿಡುಗಡೆ ಮಾಡಿದೆ.

ದಸರಾ ಗೋಲ್ಡ್ ಕಾರ್ಡ್ ದರ 6500ರೂ., ಜಂಬೂಸವಾರಿ ಟಿಕೆಟ್ ದರ 3500 ರೂ., ಪಂಜಿನ ಕವಾಯತು ಟಿಕೆಟ್ ಗೆ 1500 ರೂ. ನಿಗದಿ ಮಾಡಲಾಗಿದೆ. 2025 ನೇ ಸಾಲಿನ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2ರವರೆಗೆ ವಿಜೃಂಭಣೆಯಿಂದ ಆಚರಿಸಲಾಗುವುದು.

ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ಜಂಬೂಸವಾರಿ, ಪಂಜಿನ ಕವಾಯತು ಕಾರ್ಯಕ್ರಮಗಳ ವೀಕ್ಷಣೆಗೆ ಟಿಕೆಟ್ ಮತ್ತು ಗೋಲ್ಡ್ ಕಾರ್ಡ್ ಗಳನ್ನು ಖರೀದಿಸಲು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಟಿಕೆಟ್ ಮತ್ತು ಗೋಲ್ಡ್ ಕಾರ್ಡ್ ಗಳ ಮಾರಾಟ ಆರಂಭಿಸಲಾಗಿದೆ. ಸಾರ್ವಜನಿಕರಿಗೆ ದಸರಾ ಗೋಲ್ಡ್ ಕಾರ್ಡ್ ಮತ್ತು ಟಿಕೆಟ್ ಗಳನ್ನು ಮೈಸೂರು ದಸರಾ ಅಧಿಕೃತ ಜಾಲತಾಣ https://mysuredasara.gov.in ಮೂಲಕ ಖರೀದಿಸಬಹುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read