ಮೈಸೂರು : ಮೈಸೂರಿನಲ್ಲಿ ಇಬ್ಬರು ರೈತರ ಮೇಲೆ ಹುಲಿ ದಾಳಿ ನಡೆಸಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ.
ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಇಬ್ಬರು ರೈತರ ಮೇಲೆ ಹುಲಿ ದಾಳಿ ನಡೆಸಿದೆ. ಗೌಡನಕಟ್ಟೆ ಗ್ರಾಮದಲ್ಲಿ ಜಮೀನಿಗೆ ಬಂದಿದ್ದ ರೈತರ ಮೇಲೆ ಹುಲಿ ದಾಳಿ ನಡೆದಿದೆ. ಅದೃಷ್ಟವಶಾತ್ ಇಬ್ಬರು ರೈತರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರೈತರು ಜೋರಾಗಿ ಕಿರುಚಿಕೊಂಡ ಹಿನ್ನೆಲೆ ಹುಲಿ ಓಡಿ ಹೋಗಿದೆ. ಘಟನೆ ಹಿನ್ನೆಲೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಹುಲಿ ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
