HomeKarnatakaBIG NEWS: ಹುಲಿ ದಾಳಿಗೆ ರೈತ ಮಹಿಳೆ ಬಲಿ

BIG NEWS: ಹುಲಿ ದಾಳಿಗೆ ರೈತ ಮಹಿಳೆ ಬಲಿ

ಮೈಸೂರು: ಹುಲಿ ದಾಳಿಗೆ ಮತ್ತೋರ್ವ ಮಹಿಳೆ ಬಲಿಯಾಗಿದ್ದಾರೆ. ದನ ಮೇಯಿಸಲು ಹೋಗಿದ್ದಾಗ ನರಭಕ್ಷಕ ಹುಲಿ ದಾಳಿ ನಡೆಸಿದ್ದು, ರೈತ ಮಹಿಳೆಯನ್ನು ತಿಂದು ಹಾಕಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬಳ್ಳೂರ್ ಹುಂಡಿ ಗ್ರಾಮದಲ್ಲಿ ನಡೆದಿದೆ.

ರತ್ನಮ್ಮ (55) ಮೃತ ಮಹಿಳೆ. ದನ ಮೇಯಿಸಲು ಕಾಡಂಚಿಗೆ ಹೋಗಿದ್ದಾಗ ಈ ದುರಂತ ಸಂಭವಿಸಿದೆ. ಮಹಿಳೆಯ ದೇಹದ ಎಡ ಭಾಗವನ್ನೇ ಹುಲಿ ತಿಂದು ಹಾಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆ ಬೆನ್ನಲ್ಲೇ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಲಿ ದಾಳಿಯಿಂದ ಗ್ರಾಮದಲ್ಲಿ ಜನರು ಜೀವ ಕಳೆದುಕೊಳ್ಳುತ್ತಿದ್ದರು ಹುಲಿ ಸೆರೆ ಹಿಡಿಯಲು ಅರಣ್ಯ ಇಲಾಖೆ ಮುಂದಾಗಿಲ್ಲ ಎಂದು ಕಿಡಿಕಾರಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular