 ದಾವಣಗೆರೆ : ದಾವಣಗೆರೆಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಹುಲಿ ಉಗುರು ಮತ್ತು ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರು ಜನ ಅರೋಪಿಗಳನ್ನು ಬಂಧಿಸಿದ್ದಾರೆ.
ದಾವಣಗೆರೆ : ದಾವಣಗೆರೆಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಹುಲಿ ಉಗುರು ಮತ್ತು ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರು ಜನ ಅರೋಪಿಗಳನ್ನು ಬಂಧಿಸಿದ್ದಾರೆ.
ಜಿ.ಮಲ್ಲಿಕಾರ್ಜುನಪ್ಪ ಬಡಾವಣೆಯಲ್ಲಿ ಸಿಇಎನ್ ಠಾಣೆಯ ಪೊಲೀಸರು ಆರು ಜನ ಅರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಅಶೋಕ್ ಕುಮಾರ್ (27), ಲೋಕೇಶ್ (40), ಕಾರ್ತಿಕ್ (32), ನೌರತನ್(34), ರಾಜಸ್ಥಾನ ಮೂಲದ ರಮೇಶ್ ಕುಮಾರ್ (39) ಹಾಗೂ ಸುನೀಲ್ ಕುಮಾರ್ (28) ಎಂದು ಗುರುತಿಸಲಾಗಿದೆ.
ಆರೋಪಿಗಳಿಂದ ಆರು ಹುಲಿ ಉಗುರು, ಮಾದಕ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂಬಂಧ ಸಿಇಎನ್ ಠಾಣೆಯಲ್ಲಿ 7 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

		 Loading ...
 Loading ... 