HomeKarnatakaBIG NEWS: ನಟ ದರ್ಶನ್ ವಿರುದ್ಧ ದೂರು ನೀಡಿದ್ದಕ್ಕೆ ಕೊಲೆ ಬೆದರಿಕೆ; ಕಮಿಷ್ನರ್ ಗೆ ದೂರು...

BIG NEWS: ನಟ ದರ್ಶನ್ ವಿರುದ್ಧ ದೂರು ನೀಡಿದ್ದಕ್ಕೆ ಕೊಲೆ ಬೆದರಿಕೆ; ಕಮಿಷ್ನರ್ ಗೆ ದೂರು ನೀಡಿದ ಶಿವಕುಮಾರ್

ಬೆಂಗಳೂರು: ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ವಿರುದ್ಧ ದೂರು ದಾಖಲಿಸಿದ್ದ ವಂದೇ ಮಾತರಂ ಸಂಘಟನೆಯ ಮುಖಂಡ ಶಿವಕುಮಾರ್ ಅವರಿಗೆ ಬೆದರಿಕೆ ಕರೆಗಳು ಬರುತ್ತಿರುವುದಾಗಿ ಸ್ವತಃ ಶಿವಕುಮಾರ್ ಆರೋಪಿಸಿದ್ದಾರೆ.

ದರ್ಶನ್ ಅಭಿಮಾನಿಗಳಿಂದ ಕೊಲೆ ಬೆದರಿಕೆ ಬರುತ್ತಿದೆ. ಇದರಲ್ಲಿ ದರ್ಶನ್ ಕೈವಾಡವಿದೆ ಎಂದು ಶಿವಕುಮಾರ್ ಆರೋಪಿಸಿದ್ದಾರೆ.

ಅಕ್ಟೋಬರ್ 25ರಂದು ನಟ ದರ್ಶನ್ ವಿರುದ್ಧ ದೂರು ಕೊಟ್ಟಿದ್ದೆವು. ದೂರು ನೀಡಿದ್ದಕ್ಕೆ ನಮಗೆ ಬೆದರಿಕೆ ಕರೆಗಳು ಬರುತ್ತಿವೆ. ದರ್ಶನ್ ಅಭಿಮಾನಿಗಳು ನಿನ್ನೆ ನನ್ನ ಕಾರನ್ನು ಹಿಂಬಾಲಿಸಿಕೊಂಡು ಬಂದು ಟಚ್ ಮಾಡಿದ್ದಾರೆ. ದರ್ಶನ್ ತಪ್ಪುಮಾಡಿಲ್ಲ ಎನ್ನುವುದಾದರೆ ಅಭಿಮಾನಿಗಳು ಯಾಕೆ ಈರೀತಿ ಮಾಡುತ್ತಿದ್ದಾರೆ? ದರ್ಶನ್ ಅಭಿಮಾನಿಗಳ ಸಂಘದವರೇ ಈ ಕೆಲಸ ಮಾಡುತ್ತಿದ್ದಾರೆ. ಬೆದರಿಕೆ ಕರೆ ಹಿಂದೆ ದರ್ಶನ್ ಕೈವಾಡವಿದೆ ಎಂದು ಹೇಳಿರುವ ಶಿವಕುಮಾರ್, ಬೆಂಗಳೂರು ನಗರ ಪೊಲಿಸ್ ಆಯುಕ್ತ ಬಿ.ದಯಾನಂದ ಅವರಿಗೆ ದೂರು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular