BIG NEWS: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ, ಅಳಿಯನಿಗೂ ಎದುರಾಯ್ತು ಹುಲಿ ಉಗುರು ಸಂಕಷ್ಟ

ಬೆಳಗಾವಿ: ಹುಲಿ ಉಗುರು ಧರಿಸಿದ್ದವರಿಗೆ ಸಂಕಷ್ಟ ಎದುರಾಗಿದೆ. ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನ ಬೆನ್ನಲ್ಲೇ ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟರು, ನಿರ್ಮಾಪಕರು, ರಾಜಕಾರಣಿಗಳು, ರಾಜಕಾರಣಿಗಳ ಮಕ್ಕಳು, ಅರ್ಚಕರು, ಗುರೂಜಿಗಳು ಸೇರಿದಂತೆ ಎಲ್ಲರಿಗೂ ಕಂಟಕ ಎದುರಾಗಿದೆ.

ಹುಲಿ ಉಗುರು ಪೆಂಡೆಂಟ್ ಧರಿಸಿರುವವರಲ್ಲಿ ಈಗ ಗಣ್ಯಾತಿ ಗಣ್ಯರ ಹೆಸರು ತಳುಕು ಹಾಕಿಕೊಂಡಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಹಾಗೂ ಸಹೋದರಿಯ ಅಳಿಯನಿಗೂ ಹುಲಿ ಉಗುರು ಸಂಕಷ್ಟ ತಂದೊಡ್ಡಿದೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರಿಯ ಅಳಿಯ ರಜತ್ ಕೊರಳಲ್ಲಿ ಹುಲಿ ಉಗುರಿನ ಪೆಂಡೆಂಟ್ ಇರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿವೆ. ಈ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅವರ ಅಳಿಯನ ನಿವಾಸದಲ್ಲಿ ಪರಿಶೀಲನೆ ನಡೆಸುವ ಸಾಧ್ಯತೆ ಇದೆ.

ಹುಲಿ ಉಗುರು ಪೆಂಡೆಂಟ್ ವಿಚಾರವಾಗಿ ಪ್ರತಿಕ್ರಿಯಿಸಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅಳಿಯ ರಜತ್ ಉಳ್ಳಾಗಡ್ಡಿಮಠ, ಅದು ನಿಜವಾದ ಹುಲಿ ಉಗುರು ಅಲ್ಲ. ಮದುವೆ ಸಂದರ್ಭದಲ್ಲಿ ಫೋಟೋ ಶೂಟ್ ಗಾಗಿ ಹುಲಿ ಉಗುರಿನ ಮಾದರಿಯ ಪೆಂಡೆಂಟ್ ಧರಿಸಿದ್ದೆ. ಈಗ ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read