HomeKarnatakaBIG NEWS: ಹುಲಿ ಉಗುರು ಇಟ್ಟುಕೊಳ್ಳುವುದು ಶಿಕ್ಷಾರ್ಹ ಅಪರಾಧ; ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಕ್ರಮ ಖಚಿತ;...

BIG NEWS: ಹುಲಿ ಉಗುರು ಇಟ್ಟುಕೊಳ್ಳುವುದು ಶಿಕ್ಷಾರ್ಹ ಅಪರಾಧ; ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಕ್ರಮ ಖಚಿತ; ಸಚಿವ ಈಶ್ವರ್ ಖಂಡ್ರೆ ಸ್ಪಷ್ಟನೆ

ಕಲಬುರ್ಗಿ: ಹುಲಿ ಉಗುರು ಹೊಂದಿರುವವರಿಗೆ ಕಾನೂನು ಸಂಕಷ್ಟ ಎದುರಾಗಿದೆ. ಹುಲಿ ಉಗುರು ಇಟ್ಟುಕೊಳ್ಳುವುದು ಶಿಕ್ಷಾರ್ಹ ಅಪರಾಧ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ಹುಲಿ ಉಗುರು, ಆನೆ ದಂತ ಸಂಗ್ರಹಣೆ ವನ್ಯ ಜೀವಿ ಸಂರಕ್ಷಣಾ ಕಾಯ್ದೆ ಅಡಿ ಅಪರಾಧ. ಹುಲಿ ಉಗುರು, ಆನೆ ದಂತ, ಹುಲಿ ಚರ್ಮ, ಜಿಂಕೆ ಚರ್ಮ ಅಥವಾ ಇನ್ಯಾವುದೇ ಪ್ರಾಣಿಗಳ ಚರ್ಮ, ಉಗುರು, ಹಲ್ಲು ಸಂಗ್ರಹ ಅಥವಾ ಮಾರಾಟಕ್ಕೆ ಅವಕಾಶವಿಲ್ಲ. ಇವುಗಳನ್ನು ಸಂಗ್ರಹಿಸುವುದು, ಧರಿಸುವುದು ಕೂಡ ಅಪರಾಧವಾಗಿದೆ. ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹುಲಿ ಉಗುರು ಇಟ್ಟುಕೊಂಡವರು ಎಷ್ಟೇ ಪ್ರಭಾವಿಗಳಾಗಿರಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಇದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಸ್ಪಷ್ಟಪಡಿಸಿದರು.

 

For Latest News Updates, Join Our Whatsapp Community🚩
RELATED ARTICLES

Most Popular