HomeLatest NewsBREAKING: ಐದು ಹುಲಿಗಳ ಸಾವು ಪ್ರಕರಣ: ಡಿಸಿಎಫ್ ಚಕ್ರಪಾಣಿ ಸೇರಿ ಮೂರು ಅಧಿಕಾರಿಗಳ ಸಸ್ಪೆಂಡ್ ಗೆ...

BREAKING: ಐದು ಹುಲಿಗಳ ಸಾವು ಪ್ರಕರಣ: ಡಿಸಿಎಫ್ ಚಕ್ರಪಾಣಿ ಸೇರಿ ಮೂರು ಅಧಿಕಾರಿಗಳ ಸಸ್ಪೆಂಡ್ ಗೆ ಶಿಫಾರಸು

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಫ್ ಸೇರಿದಂತೆ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ.

ಮಲೆ ಮಹದೇಶ್ವರ ಅರಣ್ಯ ಪ್ರದೇಶದಲ್ಲಿ ತಾಯಿ ಹುಲಿ ಸೇರಿದಂತೆ ಐದು ಹುಲಿಗಳಿಗೆ ವಿಷಪ್ರಾಶನ ಮಾಡಿ ಕೊಂದಿರುವ ಘಟನೆ ಇತ್ತೀಚೆಗೆ ಬೆಳಕಿಗೆ ಬಂದಿತ್ತು. ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು. ಇದೀಗ ಅರಣ್ಯ ಅಧಿಕಾರಿಗಳ ನಿರ್ಲಕ್ಷ್ಯ, ಕರ್ತವ್ಯಲೋಪವೇ ಘಟನೆಗೆ ಕಾರಣ ಎಂಬುದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಮೂವರು ಅಧಿಕಾರಿಗಳ ಅಮಾನತಿಗೆ ಶಿಫಾರಸು ಮಾಡಲಾಗಿದೆ.

ಡಿಸಿಎಫ್ ಚಕ್ರಪಾಣಿ ಸೇರಿದಂತೆ ಮೂವರು ಹಿರಿಯ ಅಧಿಕಾರಿಗಳನ್ನು ಸಸ್ಪೆಂಡ್ ಮಾಡುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಶಿಫಾರಸು ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular