HomeLatest Newsಮಹದೇಶ್ವರ ಬೆಟ್ಟದಲ್ಲಿ ತಾಯಿ ಹುಲಿ, ನಾಲ್ಕು ಮರಿಗಳು ಅನುಮಾನಾಸ್ಪದವಾಗಿ ಸಾವು

ಮಹದೇಶ್ವರ ಬೆಟ್ಟದಲ್ಲಿ ತಾಯಿ ಹುಲಿ, ನಾಲ್ಕು ಮರಿಗಳು ಅನುಮಾನಾಸ್ಪದವಾಗಿ ಸಾವು

ಚಾಮರಾಜನಗರ: ತಾಯಿ ಹುಲಿ ಹಾಗೂ ನಾಲ್ಕು ಮರಿಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಸ್ವರ ವನ್ಯಧಾಮದ ಹೂಗ್ಯಂ ವನ್ಯಜೀವಿ ವಲಯದ ಮೀಣ್ಯಂನಲ್ಲಿ ನಡೆದಿದೆ.

ತಾಯಿ ಹುಲಿ ಹಾಗೂ ನಾಲ್ಕು ಮರಿಗಳ ಮೃತದೇಹ ಪತ್ತೆಯಾಗಿದ್ದು, ವಿಷಪ್ರಾಶನದಿಂದ ಹುಲಿಗಳು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮೋಲ್ನೋಟಕ್ಕೆ ವಿಷಪ್ರಾಶನದಿಂದ ಸಾವನ್ನಪ್ಪಿರಬಹುದು ಎಂದು ಅರಣ್ಯಾಧಿಕಾರಿಗಳು ಅನುಮಾನ ವ್ಯಕ್ತಪದಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹುಲಿಗಳ ಅಸಹಜ ಸಾವಿನ ಬಗ್ಗೆ ಪಿಸಿಸಿಎಫ್ ನೇತೃತ್ವದಲ್ಲಿ ತಂಡ ರಚಿಸಿ ತನಿಖೆ ನಡೆಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಆದೇಶ ನೀಡಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ನಿರ್ಲಕ್ಷ್ಯ ಕಂಡುಬಂದರೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಾಗೂ ವಿದ್ಯುತ್ ಸ್ಪರ್ಶ, ವಿಸ್ಷಪ್ರಾಶನದಿಂದ ಮೃತಪಟ್ಟರೆ ಅದಕ್ಕೆ ಕಾರಣರಾದವರ ವಿರುದ್ಧ ಕ್ರಮ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಸೂಚಿಸಿದ್ದಾರೆ.

ಅಲ್ಲದೇ ಪ್ರಕರಣ ಸಂಬಂಧ ಮೂರು ದಿನಗಳ ಒಳಗೆ ತನಿಖಾ ವರದಿ ಸಲ್ಲಿಸುವಂತೆ ಆದೇಶ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular