HomeKarnatakaBIG NEWS: ಕೊಡಗಿನಲ್ಲಿ ಹುಲಿ ದಾಳಿಗೆ ಮತ್ತೋರ್ವ ಬಲಿ

BIG NEWS: ಕೊಡಗಿನಲ್ಲಿ ಹುಲಿ ದಾಳಿಗೆ ಮತ್ತೋರ್ವ ಬಲಿ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಹುಲಿ ದಾಳಿಗೆ ಇಂದು ಮತ್ತೋರ್ವ ವ್ಯಕ್ತಿ ಬಲಿಯಾಗಿರುವ ಘಟನೆ ನಾಲ್ಕೆರಿ ಗ್ರಾಮದಲ್ಲಿ ನಡೆದಿದೆ.

ರಾಜು (60) ಹುಲಿ ದಾಳಿಗೆ ಸಾವನ್ನಪ್ಪಿದ ವ್ಯಕ್ತಿ. ಮೈಸೂರು ಜಿಲ್ಲೆಯ ಕೊಳವಿಗೆ ಹಾಡಿಯವರಾದ ರಾಜು, ಪೊನ್ನಂಪೇಟೆ ತಾಲೂಕಿನ ನಾಲ್ಕೆರಿ ಗ್ರಾಮದಲ್ಲಿ ಪೂಣಚ್ಚ ಎಂಬುವವರಿಗೆ ಸೇರಿದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ. ಈ ವೇಳೆ ಹುಲಿ ದಾಳಿ ಮಾಡಿದೆ. ಗಂಭೀರವಾಗಿ ಗಾಯಗೊಂಡಿದ್ದ ರಾಜು ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ ಕೊಡಗಿನ ಕುಟ್ಟ ಗ್ರಾಮದಲ್ಲಿ ಬಾಲಕ ಚೇತನ್ ನನ್ನು ಕೊಂದು ಭಾಗಶ: ತಿಂದು ಹಾಕಿದ್ದ ಹುಲಿ, ಇಂದು 60 ವರ್ಷದ ವ್ಯಕ್ತಿಯ ಮೇಲೆ ದಾಳಿ ನಡೆಸಿದೆ. ಹುಲಿ ದಾಳಿಯಿಂದ ಜನರು ತೋಟಕ್ಕೆ ಹೋಗಲು ಕೂಡ ಹೆದರುವಂತಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular