
ಇದೀಗ ಮೈಸೂರಿನ ಚಿಕ್ಕಕಾನ್ಯ ಬಳಿಹುಲಿ ಪ್ರತ್ಯಕ್ಷವಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಕಾಡಾನೆ ಭೀತಿ ನಡುವೆ ಮತ್ತೆ ಹುಲಿ ಕಾಟ ಹೆಚ್ಚಾಗಿದೆ. ಸಿಸಿ ಕ್ಯಾಮೆರಾದಲ್ಲಿ ಹುಲಿ ಓಡಾಟದ ದೃಶ್ಯಗಳು ಸೆರೆಯಾಗಿದೆ.
ಸದ್ಯ ಹುಲಿ ಸೆರೆಗಾಗಿ ಅರಣ್ಯ ಇಲಾಖೆ ಬೋನ್ ಇಟ್ಟಿದ್ದು, ಗ್ರಾಮಸ್ಥರು ರಾತ್ರಿ ವೇಳೆ ಅನಗತ್ಯವಾಗಿ ಓಡಾಡದಂತೆ ಸೂಚನೆ ನೀಡಿದ್ದಾರೆ. ರಾತ್ರಿ ಪಾಳಿಯಲ್ಲಿ ಕೆಲಸಕ್ಕೆ ಹೋಗುವವರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

