ಟಿ20ಯಲ್ಲಿ ಸತತ ಮೂರು ಶತಕ ಗಳಿಸಿ ವಿಶ್ವ ದಾಖಲೆ ಬರೆದ ತಿಲಕ್ ವರ್ಮಾ

ಮುಂಬೈ: ಟಿ20 ಕ್ರಿಕೆಟ್ ನಲ್ಲಿ ಸತತ ಮೂರು ಶತಕಗಳನ್ನು ಬಾರಿಸುವ ಮೂಲಕ ಭಾರತದ ಯುವ ಕ್ರಿಕೆಟಿಗ ತಿಲಕ್ ವರ್ಮಾ ವಿಶ್ವದಾಖಲೆ ಬರೆದಿದ್ದಾರೆ. ಈ ಸಾಧನೆ ಮಾಡಿದ ವಿಶ್ವದ ಮೊದಲ ಬ್ಯಾಟರ್ ಎನ್ನುವ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.

ಇತ್ತೀಚೆಗೆ ಭಾರತದ ಪರ ದಕ್ಷಿಣ ಆಫ್ರಿಕಾ ವಿರುದ್ಧ ಸತತ ಎರಡು ಶತಕ ಬಾರಿಸಿದ್ದ ಎಡಗೈ ಬ್ಯಾಟರ್ ತಿಲಕ್ ವರ್ಮಾ ಶನಿವಾರ ಮುಷ್ತಾಕ್ ಅಲಿ ಟಿ20 ಟೂರ್ನಿಯ ಮೊದಲ ಪಂದ್ಯದಲ್ಲಿ ಹೈದರಾಬಾದ್ ಪರ ಕಣಕ್ಕಿಳಿದು ಮೇಘಾಲಯ ವಿರುದ್ಧ 67 ಎಸೆತಗಳಲ್ಲಿ 14 ಬೌಂಡರಿ, 10 ಸಿಕ್ಸರ್ ಸಹಿತ 151 ರನ್ ಗಳಿಸಿದ್ದಾರೆ.

ಟಿ20ಯಲ್ಲಿ 150 ರನ್ ದಾಟಿದ ಬಾರತದ ಮೊದಲ ಪುರುಷ, ಒಟ್ಟಾರೆ ಎರಡನೇ ಕ್ರಿಕೆಟರ್ ಎನ್ನುವ ಖ್ಯಾತಿಯನ್ನು ತಿಲಕ್ ವರ್ಮಾ ಪಡೆದುಕೊಂಡಿದ್ದಾರೆ. 2022 ರಲ್ಲಿ ರಾಷ್ಟ್ರೀಯ ಮಹಿಳಾ ಟಿ20ಯಲ್ಲಿ ಅರುಣಾಚಲ ಪ್ರದೇಶದ ಕಿರಣ್ ನಾವ್ ಗಿರೆ ನಾಗಾಲ್ಯಾಂಡ್ ವಿರುದ್ಧ 162 ರನ್ ಗಳಿಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read