HomeKarnatakaರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ನಾಳೆ ಸಂಜೆ ಮುಹೂರ್ತ ಫಿಕ್ಸ್: ರಾಜ್ಯ ನಾಯಕರಿಗೆ ದೆಹಲಿಯಿಂದ ಬುಲಾವ್

ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ನಾಳೆ ಸಂಜೆ ಮುಹೂರ್ತ ಫಿಕ್ಸ್: ರಾಜ್ಯ ನಾಯಕರಿಗೆ ದೆಹಲಿಯಿಂದ ಬುಲಾವ್

ಬೆಂಗಳೂರು: ಇಂದು ಸಂಜೆ ರಾಜ್ಯ ಕಾಂಗ್ರೆಸ್ ನಾಯಕರು ದೆಹಲಿಗೆ ತೆರಳಲಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಲಿದ್ದಾರೆ.

ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಪಕ್ಷದ ಹೈಕಮಾಂಡ್ ನಾಯಕರೊಂದಿಗೆ ಅಂತಿಮ ಹಂತದ ಚರ್ಚೆ ನಡೆಸಲಿದ್ದಾರೆ. ಬೆಂಗಳೂರಿನಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೂಡ ಇಂದು ದೆಹಲಿಗೆ ತೆರಳಲಿದ್ದು, ನಾಳೆ ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿರುವ ರಾಜ್ಯ ನಾಯಕರು ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಇತ್ತ ಸಂಪುಟ ವಿಸ್ತರಣೆ ಸುಳಿವು ಹಿನ್ನೆಲೆ ದೆಹಲಿಯತ್ತ ಸಚಿವ ಆಕಾಂಕ್ಷಿಗಳು ಮುಖ ಮಾಡಿದ್ದಾರೆ. ದೆಹಲಿಯಲ್ಲಿ ನಡೆದಿದ್ದ ವಿದ್ಯಾರ್ಥಿಗಳ ಹೋರಾಟ ಅಂತ್ಯವಾದ ಹಿನ್ನೆಲೆ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕುರಿತಾದ ಚರ್ಚೆಗೆ ರಾಜ್ಯ ನಾಯಕರಿಗೆ ದೆಹಲಿಯಿಂದ ಬುಲಾವ್ ಬಂದಿದೆ. ಇಂದು ರಾಜ್ಯ ನಾಯಕರು ದೆಹಲಿಗೆ ತೆರಳಲಿದ್ದು ಸೋಮವಾರ ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜೊತೆ ಚರ್ಚೆಗೆ ಸಮಯ ನಿಗದಿಯಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಬುಧವಾರ ರಾಜ್ಯ ಸಚಿವ ಸಂಪುಟ ಸಭೆ ವಿಸ್ತರಣೆ ಆಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಂದಿನ ವಾರ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು. ಈ ಸಂಬಂಧ ದೆಹಲಿಗೆ ತೆರಳಲಿದ್ದು ಹೈಕಮಾಂಡ್ ನಾಯಕರ ಜೊತೆ ಚರ್ಚೆ ನಡೆಸಲಿದ್ದೇವೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈಗಾಗಲೇ ಸಿದ್ಧಪಡಿಸಲಾದ ಸಚಿವರ ಪಟ್ಟಿ ಅಂತಿಮಗೊಳಿಸಲು ಸೋಮವಾರ ಮಹತ್ವದ ಚರ್ಚೆ ನಡೆಯಲಿದೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular