HomeKarnatakaರಾಜ್ಯದಲ್ಲಿ ಮೇ 29 ರಿಂದ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ ಆರಂಭ

ರಾಜ್ಯದಲ್ಲಿ ಮೇ 29 ರಿಂದ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ ಆರಂಭ

ಬೆಂಗಳೂರು: ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ಮೇ 29 ರಿಂದ ಆರಂಭಿಸುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವೇಳಾಪಟ್ಟಿ ಪ್ರಕಟಿಸಿದೆ.

2023 -24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಮೇ 29 ರಿಂದ ಅಕ್ಟೋಬರ್ 7 ರವರೆಗೆ ಮೊದಲ ಅವಧಿಯ ತರಗತಿಗಳು ನಡೆಯಲಿವೆ. ಅಕ್ಟೋಬರ್ 8 ರಿಂದ 24ರ ವರೆಗೆ ದಸರಾ ರಜೆ ನೀಡಲಿದ್ದು, ಅಕ್ಟೋಬರ್ 25 ರಿಂದ 2024ರ ಏಪ್ರಿಲ್ 10ರವರೆಗೆ ಎರಡನೇ ಅವಧಿ ತರಗತಿಗಳು ನಡೆಯಲಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೇ 31, 2023 ರಂದು ರಾಜ್ಯಾದ್ಯಂತ ಏಕಕಾಲಕ್ಕೆ ಶಾಲಾ ಪ್ರಾರಂಭೋತ್ಸವ ಹಮ್ಮಿಕೊಳ್ಳಬೇಕು. ಜೂನ್ 30ರೊಳಗೆ ಪ್ರವೇಶ ಪ್ರಕ್ರಿಯೆ ಪೂರ್ಣಗೊಳಿಸಬೇಕು. 244 ದಿನಗಳನ್ನು ಶಾಲಾ ಕರ್ತವ್ಯದ ದಿನಗಳೆಂದು ಪರಿಗಣಿಸಲಾಗಿದ್ದು, 180 ದಿನಗಳನ್ನು ಬೋಧನೆ ಮತ್ತು ಕಲಿಕಾ ಪ್ರಕ್ರಿಯೆಗೆ ಮೀಸಲಿಡಲಾಗಿದೆ. 26 ದಿನ ಪರೀಕ್ಷಾ ಕಾರ್ಯಗಳಿಗೆ, 24 ದಿನ ಪಠ್ಯೇತರ ಚಟುವಟಿಕೆಗೆ, 10 ದಿನ ಮೌಲ್ಯಮಾಪನ ಪ್ರಕ್ರಿಯೆಗೆ ನಿಗದಿಪಡಿಸಲಾಗಿದೆ ಎಂದು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular