HomeKarnatakaರಸ್ತೆಗುಂಡಿ ಅವಾಂತರಕ್ಕೆ ಬೈಕ್ ನಿಂದ ಬಿದ್ದ ಮಹಿಳೆಯ ಮೇಲೆ ಹರಿದ ಟಿಪ್ಪರ್ ಲಾರಿ: ಮಹಿಳೆಯ ಕಾಲು...

ರಸ್ತೆಗುಂಡಿ ಅವಾಂತರಕ್ಕೆ ಬೈಕ್ ನಿಂದ ಬಿದ್ದ ಮಹಿಳೆಯ ಮೇಲೆ ಹರಿದ ಟಿಪ್ಪರ್ ಲಾರಿ: ಮಹಿಳೆಯ ಕಾಲು ಕಟ್

ಬಾಗಲಕೋಟೆ: ರಾಜ್ಯದಲ್ಲಿನ ರಸ್ತೆಗುಂಡಿಗಳ ಅವಾಂತರದಿಂದಾಗಿ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರೂ ಗುಂಡಿ ಮುಚ್ಚುವ ಕೆಲಸವನ್ನು ಮಾತ್ರ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸಮರ್ಪಕವಾಗಿ ಮಾಡುತ್ತಿಲ್ಲ. ಗುಂಡಿ ಬಿದ್ದ ರಸ್ತೆಯು ಮತ್ತೊಂದು ಭೀಕರ ಅಪಘಾತಕ್ಕೆ ಕಾರಣವಗಿರುವ ಘತನೆ ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ರಬಕವಿಯಲ್ಲಿ ನಡೆದಿದೆ.

ಪತಿಯೊಂದಿಗೆ ಬೈಕ್ ನಲ್ಲಿ ಹೋಗುತ್ತಿದ್ದ ಮಹಿಳೆಯೊಬ್ಬರು ರಸ್ತೆ ಗುಂಡಿಯಿಂದಾಗಿ ಬೈಕ್ ನಿಂದ ಜಾರಿ ಕೆಳಗೆ ಬಿದ್ದಿದ್ದಾರೆ. ಹೀಗೆ ಬಿದ್ದ ಮಹಿಳೆಯ ಮೇಲೆಯೇ ಟಿಪ್ಪರ್ ಲಾರಿಯೊಂದು ಹರಿದು ಹೋಗಿದೆ. ಪರಿಣಾಮ ಮಹಿಳೆಯ ಕಾಲು ಕಟ್ ಆಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪಘಾತದ ಭೀಕರತೆಗೆ ಮಹಿಳೆಯ ಎಡಗಾಲು ಸಂಪೂರ್ಣವಾಗಿ ಕಟ್ ಆಗಿದ್ದು, ಮಹಿಳೆಯ ಸ್ಥಿತಿ ಗಂಭಿರವಾಗಿದೆ. ಮಹಿಳೆಯನ್ನು ರಬಕವಿಯ ತಬಸ್ಸುಮ್ ನದಾಫ್ (25) ಎಂದು ಗುರುತಿಸಲಾಗಿದೆ.

ತಬಸ್ಸುಮ್ ಅವರು ತಮ್ಮ ಪತಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಹಿಂಬದಿ ಕುಳಿತು ತೆರಳುತ್ತಿದ್ದರು. ರಬಕವಿ ಪಟ್ಟಣದ ಚಿತ್ತರಗಿ ಆಸ್ಪತ್ರೆಯ ಎದುರಿನ ರಸ್ತೆಯಲ್ಲಿದ್ದ ಬೃಹತ್ ತಗ್ಗು-ಗುಂಡಿಗೆ ಬೈಕ್ ಚಕ್ರ ಬಿದ್ದ ರಭಸಕ್ಕೆ ಬೈಕ್ ನಿಯಂತ್ರಣ ತಪ್ಪಿ, ಮಹಿಳೆ ರಸ್ತೆಗೆ ಬಿದ್ದಿದ್ದಾರೆ. ಅದೇ ಸಮಯಕ್ಕೆ ಹಿಂಬದಿಯಿಂದ ವೇಗವಾಗಿ ಬಂದ ಟಿಪ್ಪರ್ ಲಾರಿ, ರಸ್ತೆಗೆ ಬಿದ್ದ ತಬಸ್ಸುಮ್ ಅವರ ಕಾಲಿನ ಮೇಲೆ ಹರಿದಿದೆ.

ಪರಿಣಾಮವಾಗಿ ಅವರ ಎಡಗಾಲು ತೀವ್ರವಾಗಿ ಜಜ್ಜಲ್ಪಟ್ಟು ಸಂಪೂರ್ಣವಾಗಿ ತುಂಡಾಗಿದೆ. ಈ ಭೀಕರ ಘಟನೆ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ರಸ್ತೆ ಗುಂಡಿ ಅವಾಂತರದಿಂದಾಗಿ ಮಹಿಳೆ ತನ್ನ ಕಾಲನ್ನೇ ಕಳೆದುಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಾಗಲಕೋಟೆಯಲ್ಲಿ ಸರ್ಕಾರಿ ಶಾಲೆ ಮೇಲ್ಛಾವಣಿ ಕುಸಿದು 8 ಮಕ್ಕಳಿಗೆ ಗಾಯ: ಸುಮೊಟೊ ಕೇಸ್ ದಾಖಲಿಸಿಕೊಂಡ ಲೋಕಾಯುಕ್ತ

ಬೆಂಗಳೂರು: ತರಗತಿ ನಡೆಯುತ್ತಿದ್ದಾಗಲೇ ಸರ್ಕಾಅರಿ ಶಾಲೆಯೊಂದರಲ್ಲಿ ಕೊಠಡಿಯ ಮೇಲ್ಛಾವಣಿ ಕುಸಿದುಬಿದ್ದು, 8 ಮಕ್ಕಳು ಗಾಯಗೊಂಡ ಘಟನೆ ಬಾಲಕಲೋಟೆಯ ಮುಗಳೊಳ್ಳಿಯಲ್ಲಿ ನಡೆದಿದೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್ ಅವರು ಸುಮೊಟೊ ಕೇಸ್ ದಾಖಲಿಸಿಕೊಂಡಿದ್ದಾರೆ.

ಘಟನೆ ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ, ಹೆಚ್ಚುವರಿ ಆಯುಕ್ತ, ಬಾಗಲಕೋಟೆ ಜಿಲ್ಲಾಧಿಕಾರಿ, ಬಾಗಲಕೋಟೆ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನ (ಬಿಇಒ) ಪ್ರತಿವಾದಿಯನ್ನಾಗಿ ಲೋಕಾಯುಕ್ತರು ನೋಟಿಸ್ ಜಾರಿ ಮಾಡಿದ್ಧಾರೆ.

ಈ ಸಂಬಂಧ ಅ.7 ರಂದು ಖುದ್ದು ಹಾಜರಾಗಿ ವರದಿ ಸಲ್ಲಿಸುವಂತೆ ಧಾರವಾಡದ ಹೆಚ್ಚುವರಿ ಆಯುಕ್ತರು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಉಪ ನಿರ್ದೇಶಕರು ಹಾಗೂ ಬಿಇಒಗೆ ನಿರ್ದೇಶಿಸಿದ್ದಾರೆ.

ಘಟನೆಯ ಬಗ್ಗೆ ಬಾಗಲಕೋಟೆ ಜಿಲ್ಲೆಯ ಶಾಲೆಗಳಿಗೆ ಭೇಟಿ ನೀಡಿ, ಕಟ್ಟಡಗಳ ಸ್ಥಿತಿಗತಿ, ಸುರಕ್ಷತಾ ಮಾನದಂಡಗಳು ಮತ್ತು ಮೂಲಸೌಕರ್ಯಗಳನ್ನು ಸುರಕ್ಷತಾ ಪರಿಶೀಲನೆ ನಡೆಸಲು ಹಾಗೂ ವರದಿ ಸಲ್ಲಿಸಲು ಲೋಕಾಯುಕ್ತರು ಪೊಲೀಸರಿಗೆ ಸೂಚಿಸಿದ್ದಾರೆ.

ಬುಧವಾರ ಶಾಲಾ ಮೇಲ್ಛಾವಣಿ ಕುಸಿದ ಘಟನೆ ನಡೆದ ಬಳಿಕ ಬಾಗಲಕೋಟೆ ಜಿಲ್ಲಾಡಳಿತವು ದೀರ್ಘಕಾಲೀನ ಕ್ರಮ ನಡೆಸಿದ್ದು, ಘಟನೆಯಲ್ಲಿ ಗಾಯಗೊಂಡಿದ್ದ 8 ಮಕ್ಕಳಿಗೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನಿಡಿ, ಡಿಸ್ಚಾರ್ಜ್ ಮಾಡಲಾಗಿದೆ. ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಯ ಕಿರಿಯ ಎಂಜಿನಿಯರ್ ಅಮಾನತುಗೊಳಿಸಲಾಗಿದೆ. ಹಾಗೆಯೇ, ಅದೇ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅವರನ್ನು ಅಮಾನತುಗೊಳಿಸಲು ಸಂಬಂಧಪಟ್ಟ ಪ್ರಾಧಿಕಾರಕ್ಕೆ ಶಿಫಾರಸು ಮಾಡಲಾಗಿದೆ.

ಡಿಡಿಪಿಐ, ಬಿಇಒ ಮತ್ತು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗೆ ಶೋಕಾಸ್ ನೋಟಿಸ್‌ಗಳನ್ನು ನೀಡಲಾಗಿದೆ. ತಕ್ಷಣದ ಸುರಕ್ಷತಾ ಕ್ರಮವಾಗಿ, 4 ರಿಂದ 6ನೇ ತರಗತಿಯ ವಿದ್ಯಾರ್ಥಿಗಳನ್ನು ಸಮೀಪದ ಕೆಪಿಎಸ್ ಶಾಲೆಗೆ ಸ್ಥಳಾಂತರಿಸಲಾಗುತ್ತಿದೆ. ಸಾರಿಗೆ ವೆಚ್ಚವನ್ನು ಶಿಕ್ಷಣ ಇಲಾಖೆ ಭರಿಸಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular