HomeKarnatakaBIG NEWS: ಸ್ನೇಹಿತನ ಕಿರುಕುಳಕ್ಕೆ ಬೇಸತ್ತ ಯುವಕ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

BIG NEWS: ಸ್ನೇಹಿತನ ಕಿರುಕುಳಕ್ಕೆ ಬೇಸತ್ತ ಯುವಕ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಸ್ನೇಹಿತನ ಕಿರುಕುಳಕ್ಕೆ ನೊಂದ ಯುವಕನೊಬ್ಬ ಡೆತ್ ನೋಟ್ ಬೆರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಗೌರಿಬಿದನೂರು ತಾಲೂಕಿನ ಉಡಮಲೊಡು ಗ್ರಾಮದಲ್ಲಿ ನಡೆದಿದೆ.

26 ವರ್ಷದ ಹೆಚ್.ಕೆ.ಪೃಥ್ವಿರಾಜ್ ಆತ್ಮಹತ್ಯೆಗೆ ಶರಣಾದವನು. ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ನೇಹಿತನ ಬಳಿ ಪೃಥ್ವಿರಾಜ್ ಸಾಲ ಪಡೆದಿದ್ದ. ಬಡ್ಡಿ ಸಮೇತ ಕೈ ಸಾಲ ತೀರಿಸುವಂತೆ ಸ್ನೇಹಿತ ಪೀಡಿಸುತ್ತಿದ್ದ. ಇದೇ ವಿಚಾರವಾಗಿ ನೊಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಗೌರಿಬಿದನೂರು ಗ್ರಾಮಾಂತರ ಠಾಣೆ ಪೊಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular