ತುಮಕೂರು : ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ನಗರದಲ್ಲಿ ನಡೆದಿದೆ.
ಮೃತ ಮಹಿಳೆಯನ್ನ ಸುಷ್ಮಿತಾ (23) ಎಂದು ಗುರುತಿಸಲಾಗಿದೆ. ರಾಮನಗರ ಜಿಲ್ಲೆಯ ಮಾಗಡಿಯ ಸುಷ್ಮಿತಾ ಕೊರಟಗೆರೆ ಮೂಲದ ಮೋಹನ್ ರನ್ನು ಮದುವೆಯಾಗಿದ್ದರು. ಮೋಹನ್ ಹಣ ಮತ್ತು ಸೈಟ್ ಗಾಗಿ ಪತ್ನಿಯನ್ನು ಪೀಡಿಸುತ್ತಿದ್ದರು ಎನ್ನಲಾಗಿದೆ.
ಪತಿ ಮೋಹನ್ , ಅತ್ತೆ ಹಾಗೂ ಮಾವನ ಜೊತೆ ಸೇರಿ ಕೊಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪತಿ ಮೋಹನ್ ಸೇರಿ ಮೂವರನ್ನು ಬಂಧಿಸಿದ್ದಾರೆ.
TAGGED:ವರದಕ್ಷಿಣೆ