ಬೆಂಗಳೂರು : ಪಿಡಿಒ ಕಿರುಕುಳಕ್ಕೆ ಬೇಸತ್ತು ಗ್ರಾಮ ಪಂಚಾಯತ್ ಗ್ರಂಥ ಪಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಳಲುಘಟ್ಟ ಗ್ರಾಮದಲ್ಲಿ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯತ್ ಲೈಬ್ರೆರಿಯನ್ ರಾಮಚಂದ್ರಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ರಾಮಚಂದ್ರಯ್ಯ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ರಾಮಚಂದ್ರಯ್ಯ ಅವರು ಅರೆಕಾಲಿಕ ಗ್ರಂಥಾಲಯ ಮೇಲ್ವಿಚಾರಕರಾಗಿದ್ದರು. ಪಿಡಿಒ ಗೀತಾಮಣಿ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದೆ.ಬಯೋಮೆಟ್ರಿಕ್ ಹಾಜರಾತಿ ನೀಡದೇ, ಸರಿಯಾಗಿ ಸಂಬಳ ನೀಡದೇ ಕಳೆದ 3 ತಿಂಗಳಿನಿಂದ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.
