HomeIndiaBIG NEWS: ತಿರುಪತಿಯಲ್ಲಿ ಮತ್ತೆ ಬಾಂಬ್ ಬೆದರಿಕೆ: ಇಸ್ಕಾನ್ ದೇವಾಲಯ ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ

BIG NEWS: ತಿರುಪತಿಯಲ್ಲಿ ಮತ್ತೆ ಬಾಂಬ್ ಬೆದರಿಕೆ: ಇಸ್ಕಾನ್ ದೇವಾಲಯ ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ

ತಿರುಪತಿ: ಆಂಧ್ರಪ್ರದೇಶದ ತಿರುಪತಿಯ ಪ್ರತಿಷ್ಠಿತ ಹೋಟೆಲ್ ಗಳಿಗೆ ಬಾಂಬ್ ಬೆದರಿಕೆ ಬೆನ್ನಲ್ಲೇ ಇದೀಗ ಮತ್ತೆ ಬಾಂಬ್ ಬೆದರಿಕೆ ಹಾಕಲಾಗಿದ್ದು, ವಿವಿಧ ದೇವಾಲಯ ಹೋಟೆಲ್ ಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ.

ತಿರುಪತಿಯ ಇಸ್ಕಾನ್ ದೇವಾಲಯಕ್ಕೆ ಬಾಂಬ್ ಬೆದರಿಕೆಯೊಡ್ಡಲಾಗಿದೆ. ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿದ್ದು, ಇಸ್ಕಾನ್ ದೇವಾಲಯ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ.

ವರದಿಗಳ ಪ್ರಕಾರ ಐಎಸ್ಐಎಸ್ ಉಗ್ರರು ದೇವಾಲಯವನ್ನು ಸ್ಫೋಟಿಸುವುದಾಗಿ ಇ-ಮೇಲ್ ಸಂದೇಶದಲ್ಲಿ ಕುಳುಹಿಸಲಾಗಿದೆ. ಬಾಂಬ್ ಬೆದರಿಕೆ ಕರೆ ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಪ್ರಮುಖ ಹೋಟೆಲ್ ಗಳಿಗೂ ಮತ್ತೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular