HomeIndiaತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್: ಕರ್ನಾಟಕ ಭವನ ವರ್ಷಾಂತ್ಯಕ್ಕೆ ಪೂರ್ಣ

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್: ಕರ್ನಾಟಕ ಭವನ ವರ್ಷಾಂತ್ಯಕ್ಕೆ ಪೂರ್ಣ

ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿರುಮಲ ಸಮೀಪ ನಿರ್ಮಿಸುತ್ತಿರುವ ಕರ್ನಾಟಕ ಭವನ ಡಿಸೆಂಬರ್ ನಲ್ಲಿ ಉದ್ಘಾಟನೆಯಾಗುವ ಸಾಧ್ಯತೆ ಇದೆ. ಇದರಿಂದಾಗಿ ರಾಜ್ಯದ ಯಾತ್ರಾರ್ಥಿಗಳಿಗೆ ಕಡಿಮೆ ದರದಲ್ಲೇ ಕೊಠಡಿಗಳು ಲಭ್ಯವಾಗಲಿವೆ.

ರಾಜ್ಯ ಧಾರ್ಮಿಕ ದತ್ತಿ ಇಲಾಖೆಯಿಂದ ನಿರ್ಮಿಸಿರುವ ಕರ್ನಾಟಕ ಭವನದಲ್ಲಿ ಭಕ್ತರಿಗೆ, ವಿಐಪಿಗಳಿಗೆ ಕುಳಿತುಕೊಳ್ಳಲು ವ್ಯವಸ್ಥೆ ಕಲ್ಪಿಸಲಾಗಿದೆ. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ರಾಜ್ಯ ಸರ್ಕಾರ 220 ಕೋಟಿ ರೂ. ವೆಚ್ಚದಲ್ಲಿ ಟಿಟಿಡಿ, ಆಂಧ್ರ ಸರ್ಕಾರದ ಸಹಕಾರದೊಂದಿಗೆ ಕಾಮಗಾರಿ ಆರಂಭಿಸಿತ್ತು. 24 ತಿಂಗಳ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳ್ಳುವ ಹಂತಕ್ಕೆ ಬಂದಿದ್ದು, ಡಿಸೆಂಬರ್ ವೇಳೆಗೆ ಉದ್ಘಾಟನೆಯಾಗುವ ಸಾಧ್ಯತೆ ಇದೆ. ಕರ್ನಾಟಕ ಭವನದಲ್ಲಿ ವಸತಿ ಕೊಠಡಿಗಳೊಂದಿಗೆ ಕಲ್ಯಾಣ ಮಂಟಪ, ಊಟದ ಹಾಲ್ ಕೂಡ ನಿರ್ಮಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular