ತಿರುಪತಿ: ತಿರುಪತಿ ಲಡ್ದು ಪ್ರಸಾದದಲ್ಲಿ ಕಲಬೆರಿಕೆ ತುಪ್ಪ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ತನಿಖಾ ತಂಡ ಅಂತಿಮ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.
ನಲ್ಲೂರು ಎಸಿಬಿ ನ್ಯಾಯಾಲಯಕ್ಕೆ ಸಿಬಿಐ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ದೋಷಾರೋಪ ಪಟ್ಟಿಯಲ್ಲಿ ಒಟ್ಟು 36 ಪ್ರಮುಖ ಆರೋಪಿಗಳ ಹೆಸರು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ. ಇವರಲ್ಲಿ ಕಲಬೆರಿಕೆ ತುಪ್ಪ ಪೂರೈಸಿದ ಡೈರಿ ಮಾಲೀಕರು, ಮಾಜಿ ಟಿಟಿಡಿ ಅಧಿಕಾರಿಗಳು ಕೂಡ ಇದ್ದಾರೆ.
15 ತಿಂಗಳುಗಳ ಕಾಲ 12 ರಾಜ್ಯಗಳಲ್ಲಿ ನಡೆಸಿದ ತನಿಖೆ ಬಳಿಕ ಸಿಬಿಐ ಅಧಿಕಾರಿಗಳು ಅಂತಿಮ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. 2019ರಿಂದ 2024ರವರೆಗೆ ಟಿಟಿಡಿಗೆ ಸರಬರಾಜು ಮಾಡಲಾದ ಸುಮಾರು 250 ಕೋಟಿ ರೂ ಮೌಲ್ಯದ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆಯಾಗಿತ್ತು. ಶುದ್ಧ ಹಾಲಿನ ತುಪ್ಪದ ಬದಲಿಗೆ ಪಾಮ್ ಆಯಿಲ್, ಕರ್ನಲ್ ಆಯಿಲ್, ರಾಸಾಯನಿಕ ಮಿಶ್ರಣಗಳು, ಪ್ರಾಣಿ ಕೊಬ್ಬು ಮತ್ತು ಇಅತರ ಕಡಿಮೆ ದರದ ಮಿಶ್ರಣಗಳನ್ನು ಬಳಸಿ ಕಲಬೆರಿಕೆ ತುಪ್ಪ ತಯಾರಿಸಿ ಕೊಡಲಗಿತ್ತು. ಇದನ್ನು ಶುದ್ಧ ತುಪ್ಪದಂತೆ ಕಾಣುವಂತೆ ಮಾಡಲಾಗಿತ್ತು ಎಂದು ಸಿಬಿಐ ವರದಿಯಲ್ಲಿ ಉಲ್ಲೇಖಿಸಲಾಗಿದೆ.

