BIG NEWS: ತಿರುಪತಿ ಲಡ್ಡು ವಿವಾದ: ಗುಣಮಟ್ಟ ಪರೀಕ್ಷೆಗೆ ಸಮಿತಿ ರಚನೆ

ತಿರುಪತಿ ಲಡ್ಡು ವಿವಾದಕ್ಕೆ ಸಂಬಂಧಿಸಿದಂತೆ ಲಡ್ಡು ತಯಾರಿಕೆಯಲ್ಲಿನ ಗುಣಮಟ್ಟ ಪರಿಶೀಲನೆ ಹಾಗೂ ಪರೀಕ್ಷೆ ನಡೆಸಲು ನಡೆಸಲು ದೇವಸ್ಥಾನದ ಆಡಳಿತ ಮಂಡಳಿ ಮುಂದಾಗಿದೆ.

ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ತಿರುಪತಿ ಲಡ್ಡುವಿನ ತುಪ್ಪದ ಗುಣಮಟ್ಟ ಪರೀಕ್ಷಿಸಲು ದೇವಸ್ಥಾನ ಆಡಳಿತ ಮಂಡಳಿ ಸಮಿತಿ ರಚಿಸಿದೆ.

ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳನ್ನು ಹಾಗೂ ಪ್ರಾಣಿಗಳ ಕೊಬ್ಬು, ಮೀನಿನ ಎಣ್ಣೆಯನ್ನು ಬಳಕೆ ಮಾಡಲಾಗಿದೆ ಎಂದು ಲ್ಯಾಬ್ ಟೆಸ್ಟ್ ನಲ್ಲಿ ದೃಢಪಟ್ಟಿದೆ. ಈ ಮೂಲಕ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಮಾಡಿದ ಆರೋಪ ನಿಜವಾದಂತಾಗಿದೆ. ಈ ಹಿನ್ನೆಲೆಯಲ್ಲಿ ದೇವಸ್ಥಾನ ಆಡಳಿತ ಮಂಡಳಿ ತಿರುಪತಿ ಲಡ್ಡು ತುಪ್ಪದ ಗುಣಮಟ್ಟ ಪರೀಕ್ಷೆಗೆ ಸಮಿತಿ ರಚಿಸಿದೆ.

ಡಾ.ಸುರೇಂದ್ರನಾಥ್, ಡಾ.ವಿಜಯ್ ಭಾಸ್ಕರ್ ರೆಡ್ಡಿ, ಡಾ. ಸ್ವರ್ಣಲತಾ ಮತ್ತು ಡಾ.ಮಹದೇವನ್ ಅವರನ್ನೊಳಗೊಂದ ನಾಲ್ಕು ಜನರ ತಜ್ಞರ ಸಮಿತಿಯನ್ನು ರಚಿಸಲಾಗಿದೆ. ಸಮಿತಿ ಒಂದು ವಾರದೊಳಗೆ ವರದಿ ನೀಡುವ ನಿರೀಕ್ಷೆ ಇದೆ. ಈ ಬಗ್ಗೆ ತಿರುಮಲ ತಿರುಪತಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಜೆ.ಶ್ಯಾಮಲಾ ರಾವ್ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read