HomeIndiaವಿಶ್ವದ ಶ್ರೀಮಂತ ದೇಗುಲ ತಿರುಪತಿಯಲ್ಲಿ ಒಂದೇ ವರ್ಷ 1451 ಕೋಟಿ ರೂ. ಸಂಗ್ರಹ

ವಿಶ್ವದ ಶ್ರೀಮಂತ ದೇಗುಲ ತಿರುಪತಿಯಲ್ಲಿ ಒಂದೇ ವರ್ಷ 1451 ಕೋಟಿ ರೂ. ಸಂಗ್ರಹ

ತಿರುಪತಿ: ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಒಂದೇ ವರ್ಷ 1451 ಕೋಟಿ ರೂ. ಸಂಗ್ರಹವಾಗಿದೆ.

2021 ರಲ್ಲಿ 833 ಕೋಟಿ ರೂಪಾಯಿ ಸಂಗ್ರಹವಾಗಿದ್ದು, ಇದಕ್ಕಿಂತ ಶೇಕಡ 74 ರಷ್ಟು ಅಧಿಕ ಹಣ ಪ್ರಸಕ್ತ ವರ್ಷದಲ್ಲಿ ಸಂಗ್ರಹವಾಗಿದೆ. 2022 ರಲ್ಲಿ ತಿರುಪತಿ ತಿರುಮಲ ದೇವಾಲಯಕ್ಕೆ 2.3 ಕೋಟಿ ಭಕ್ತರು ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡಿದ್ದು, 11 ಕೋಟಿ ಲಡ್ಡು ಮಾರಾಟವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2022 ಜನವರಿ 1 ರಿಂದ ಡಿಸೆಂಬರ್ 30ರವರೆಗೆ ದೇವಾಲಯದ ಹುಂಡಿಯಲ್ಲಿ 1,451.15 ಕೋಟಿ ರೂಪಾಯಿ ಸಂಗ್ರಹವಾಗಿದೆ. 11.42 ಲಕ್ಷ ಕೋಟಿ ಲಡ್ಡು ಮಾರಾಟ ಮಾಡಲಾಗಿದ್ದು, ಮೂರು ಕೋಟಿಗೂ ಹೆಚ್ಚು ಅನ್ನಪ್ರಸಾದ ವಿತರಿಸಲಾಗಿದೆ.

ಇಂದಿನಿಂದ ವೈಕುಂಠ ಏಕಾದಶಿ ನಡೆಯಲಿದೆ. ಜನವರಿ 2 ರಿಂದ 14 ರವರೆಗೆ ವೈಕುಂಠ ದ್ವಾರದರ್ಶನಕ್ಕೆ ಬರುವ ಭಕ್ತರಿಗೆ ಅನುಕೂಲ ಕಲ್ಪಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular