ತಿರುಪತಿ ತಿಮ್ಮಪ್ಪನ ಭಕ್ತರಿಗೆ ಮುಖ್ಯ ಮಾಹಿತಿ: ಫೆ. 5 ರಿಂದ ದೇಗುಲದ ಹೊರಗೆ ಹುಂಡಿ ಹಣ ಎಣಿಕೆ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿರುಮಲ ವೆಂಕಟೇಶ್ವರ ದೇವಾಲಯದಲ್ಲಿ ಫೆಬ್ರವರಿ 5 ರಿಂದ ದೇಗುಲದ ಹೊರಗೆ ಹುಂಡಿ ಹಣ ಎಣಿಕೆ ಮಾಡಲಾಗುತ್ತದೆ.

ದೇವಸ್ಥಾನದಿಂದ ಸ್ವಲ್ಪ ದೂರದಲ್ಲಿರುವ ಹೊಸ ಕಟ್ಟಡದಲ್ಲಿ ಇದೇ ಮೊದಲ ಬಾರಿಗೆ ಹುಂಡಿ ಎಣಿಕೆ ಕಾರ್ಯ ಆರಂಭವಾಗಲಿದೆ. ಪ್ರತಿದಿನ ಸುಮಾರು ಮೂರರಿಂದ ನಾಲ್ಕು ಕೋಟಿ ರೂಪಾಯಿ ಕಾಣಿಕೆ ಹಣ ಸಂಗ್ರಹವಾಗುತ್ತದೆ. ಬೆಂಗಳೂರಿನ ದಾನಿಯೊಬ್ಬರು 23 ಕೋಟಿ ರೂ. ದೇಣಿಗೆ ನೀಡಿದ್ದು, ಇದರಿಂದ ಪರಾಕ್ರಮಿ ಹೆಸರಿನ ನೂತನ ಕಟ್ಟಡ ನಿರ್ಮಿಸಲಾಗಿದ್ದು, ಈ ಕಟ್ಟಡದಲ್ಲಿ ಹುಂಡಿ ಎಣಿಕೆ ನಡೆಸಲಾಗುವುದು.

ದೇವಾಲಯದಲ್ಲಿ ಸಂಗ್ರಹವಾದ ಹುಂಡಿ ಹಣವನ್ನು ಅಲ್ಲಿಗೆ ತೆಗೆದುಕೊಂಡು ಹೋಗುವುದು ಸವಾಲಿನ ಕೆಲಸವಾಗಿದ್ದ ಕಾರಣ ಕೆಲವು ಪ್ರಾಯೋಗಿಕ ಪರೀಕ್ಷೆ ನಡೆಸಲಾಗಿದ್ದು, ಫಲಿತಾಂಶ ಉತ್ತಮವೆಂದು ಕಂಡು ಬಂದ ನಂತರ ನೂತನ ಕಟ್ಟಡದಲ್ಲಿ ಎಣಿಕೆ ಕಾರ್ಯ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read