HomeLive Newsತಿರುಪತಿ ತಿಮಪ್ಪನ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ...

ತಿರುಪತಿ ತಿಮಪ್ಪನ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ

ಬೆಂಗಳೂರು: ತಿರುಪತಿಯಲ್ಲಿ ನಿತ್ಯ ನಡೆಯುವ ಮೊದಲ ಆರತಿ ಕರ್ನಾಟಕದ್ದು. ಈ ಆರತಿಯನ್ನ ಕರ್ನಾಟಕದ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಇತರೇ ಗಣ್ಯರಿಗೆ ಶಿಷ್ಟಾಚಾರದ‌ ಪ್ರಕಾರ ನೀಡುವ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನ ಬನಶಂಕರಿಯ ಆರನೇ ಹಂತದ ಲಿಂಗಧೀರನಹಳ್ಳಿಯಲ್ಲಿ ಶ್ರೀ ಷಣ್ಮುಖ ಸುಬ್ರಮಣ್ಯ ದೇಗುಲದ ಶೀಲಾನ್ಯಾಸ ನೆರವೇರಿಸಿ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್, ತಿರುಮಲ ವೆಂಕಟೇಶ್ವರ ದೇಗುಲದ ಒಳ ಮುಖ್ಯದ್ವಾರದ ಬಳಿ ತೆರಳಿ ಪೂಜೆ ಮಾಡಲು ರಾಜ್ಯದ ಮುಖ್ಯಮಂತ್ರಿಗಳಿಗೆ ಮಾತ್ರ ಅವಕಾಶವಿದೆ. ಈ ಆರತಿಯನ್ನು ಪ್ರತಿದಿನ ಕರ್ನಾಟಕ ಸರ್ಕಾರದ ವಿಶೇಷ ಅಧಿಕಾರಿ ಪಡೆಯುತ್ತಾರೆ. ಇನ್ನು ಮುಂದಿನ ದಿನಗಳಲ್ಲಿ, ಸಚಿವರು, ಶಾಸಕರು, ಹಿರಿಯ ಅಧಿಕಾರಿಗಳು, ನ್ಯಾಯಾಧೀಶರು ಸೇರಿದಂತೆ ಯಾರಾದರೂ ಭೇಟಿ ನೀಡಿದ್ದರೆ ಅಥವಾ ಸರ್ಕಾರ ಪರವಾಗಿ ಯಾರೇ ಹೋಗಿದ್ದರೂ ಅವರಿಗೆ ಈ ಆರತಿ ನೀಡಬೇಕು ಎನ್ನುವ ಆದೇಶ ಹೊರಡಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದರು.

ಎಷ್ಟೋ ಮಂದಿ ಶಾಸಕರು, ಜನಪ್ರತಿನಿಧಿಗಳು ತಿರುಪತಿಗೆ ಹೋದಾಗ ದರ್ಶನ ಸಿಗದೇ ವಾಪಸ್ ಬಂದಿದ್ದಾರೆ. ಈಗ ದೇವರ ಮುಂದೆ ನಿಂತು ಆರತಿ ಪಡೆಯಲು ಅವಕಾಶ ನೀಡಲಾಗುವುದು. ಈ ರಾಜ್ಯದ ಸೇವೆ ಮಾಡುವವರಿಗೆ ದೇವರಲ್ಲಿ ಪ್ರಾರ್ಥನೆ ಮಾಡಲು ಈ ಅವಕಾಶ ಒದಗಿಸಲಾಗಿದೆ. ಇದು ನನ್ನ ಕಾಲದಲ್ಲಿ ಆಗಲಿರುವ ಮುಖ್ಯ ಘೋಷಣೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾನು ಜೈಲಿಗೆ ಹೋಗಿ ಬಿಡುಗಡೆಯಾಗಿ ಬಂದ ದಿನದಿಂದ ಮನೆದೇವರು ತಿರುಪತಿಗೆ ಹೋಗಿರಲಿಲ್ಲ. ಇತ್ತೀಚೆಗೆ ಭೇಟಿ ನೀಡಿದ್ದ ಸಮಯದಲ್ಲಿ ಈ ಬಗ್ಗೆ ಆಲೋಚನೆ ಮಾಡಿದೆ. ಎಸ್ ಎಂ ಕೃಷ್ಣ ಅವರು ತಿರುಪತಿಯಲ್ಲಿ ಕರ್ನಾಟಕ ಟ್ರಸ್ಟ್ ರಚಿಸಿ, ವೈಭವವಾದ ಕಟ್ಟಡ ಕಟ್ಟುವ ಉದ್ದೇಶದಿಂದ ನನ್ನನ್ನು ಅಧ್ಯಕ್ಷನನ್ನಾಗಿ ಮಾಡಿದ್ದರು. ಅಷ್ಟೊತ್ತಿಗೆ ನಮ್ಮ ಸರ್ಕಾರದ ಅವಧಿ ಮುಗಿಯಿತು. ನನ್ನನ್ನ ಮುಂದುವರೆಸದ ಕಾರಣ ಆ ಕೆಲಸ ಮಾಡಲು ಆಗಿರಲಿಲ್ಲ. ಮಹಾರಾಜರ ಕಾಲದಲ್ಲೇ ನೀಡಿದ ಏಳು‌ ಎಕರೆ ಜಾಗ ಅಲ್ಲಿತ್ತು ಎಂದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular