ಕೇರಳದ ತಿರುವನಂತಪುರಂ ಅಂತರಾಷ್ಟ್ರೀಯ ಏರ್ ಪೋರ್ಟ್ ಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದೆ.
ಇ-ಮೇಲ್ ಮೂಲಕ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಎ ಹಕಲಾಗಿದೆ ಎಂದು ಏರ್ ಪೋರ್ಟ್ ಪಿಆರ್ ಒ ಖಚಿತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ವಿಷಯ ತಿಳಿಯುತ್ತಿದ್ದಂತೆ ವಿಮಾನ ನಿಲ್ದಾಣಕ್ಕೆ ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.