ತಿರುವನಂತಪುರಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಿದ ಬೆನ್ನಲ್ಲೇ ಇದೀಗ ತಿರುವನಂತಪುರಂ ರೈಲು ನಿಲ್ದಾಣಕ್ಕೂ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ.
ರೈಲು ನಿಲ್ದಾಣ ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ರವಾನಿಸಲಾಗಿದೆ ಎಂದು ತಿಳಿದುಬಂದಿದೆ. ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ರೈಲ್ವೆ ನಿಲ್ದಾಣದಲ್ಲಿ ಪೊಲೀಸರು, ಬಾಂಬ್ ಪತ್ತೆ ಹಾಗೂ ಬಾಂಬ್ ನಿಷ್ಕ್ರಿಯ ದಳ ಭೇಟಿ ನೀಡಿ ಪರಿಶೀಲನೆ ನಡೆಸಿದೆ.