HomeKarnatakaBIG NEWS : ‘ನಾಡಪ್ರಭು ಕೆಂಪೇಗೌಡ’ ಚಿತ್ರದ ಟೈಟಲ್ ವಿವಾದ ; T.S ನಾಗಾಭರಣ ವಿರುದ್ಧ...

BIG NEWS : ‘ನಾಡಪ್ರಭು ಕೆಂಪೇಗೌಡ’ ಚಿತ್ರದ ಟೈಟಲ್ ವಿವಾದ ; T.S ನಾಗಾಭರಣ ವಿರುದ್ಧ ದೂರು ದಾಖಲು.!

ಬೆಂಗಳೂರು : ಸ್ಯಾಂಡಲ್ ವುಡ್ ನಲ್ಲಿ ನಾಡಪ್ರಭು ಕೆಂಪೇಗೌಡ’ ಚಿತ್ರದ ಟೈಟಲ್ ವಿವಾದ ಶುರುವಾಗಿದ್ದು, ಟಿ.ಎಸ್ ನಾಗಾಭರಣ ವಿರುದ್ಧ ದೂರು ದಾಖಲಾಗಿದೆ.

ನಿರ್ಮಾಪಕ ಕಿರಣ್ ತೋಟಂಬೈಲೆ ಅವರು ನಾಗಾಭರಣ ವಿರುದ್ಧ ದೂರು ನೀಡಿದ್ದಾರೆ. ಕಿರಣ್ ಅವರು ‘ಧರ್ಮಭೀರು ನಾಡಪ್ರಭು ಕೆಂಪೇಗೌಡ’ ಹೆಸರಿನ ಸಿನಿಮಾ ಘೋಷಣೆ ಮಾಡಿ ಸುಮಾರು ತಿಂಗಳಾಗಿದೆ. . ನಿರ್ದೇಶಕ ಬಾಬು ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಕಡೆ ಟಿ.ಎಸ್ ನಾಗಾಭರಣ ಅವರು ‘ನಾಡಪ್ರಭು ಕೆಂಪೇಗೌಡ’ ಟೈಟಲ್ ರಿಜಿಸ್ಟರ್ ಮಾಡಿಸಿ, ಸಿನಿಮಾ ಘೋಷಿಸಿದ್ದಾರೆ. ಈ ಹಿನ್ನೆಲೆ ಕಿರಣ್ ತೋಟಂಬೈಲೆ ಅವರು ನಾಗಾಭರಣ ವಿರುದ್ಧ ದೂರು ನೀಡಿದ್ದಾರೆ.

ನಾಡಪ್ರಭು ಕೆಂಪೇಗೌಡ ಕಾಪಿರೈಟ್ಸ್ ನಮ್ಮದು ಎಂದು ನಾಗಾಭರಣ ಹೇಳಿಕೊಂಡಿದ್ದಾರೆ. ಕಿರಣ್ ಅವರಿಗೆ ನಿರ್ಬಂಧಕ ನೋಟಿಸ್ ಕಳುಹಿಸಿದ್ದಾರೆ‘.   ನಾಡಪ್ರಭು ಕೆಂಪೇಗೌಡ’ ಚಿತ್ರದಲ್ಲಿ ಡಾಲಿ ಧನಂಜಯ್ ಅಭಿನಯಿಸುತ್ತಿದ್ದು, ಸಿನಿಮಾದ ಪೋಸ್ಟರ್ ಈಗಾಗಲೇ ರಿಲೀಸ್ ಆಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular